ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದಲ್ಲಿ ಕೊರೋನಾ ದಿಢೀರ್ ಇಳಿಕೆ: ಇಂದು ಬೆಂಗಳೂರಿನಲ್ಲಿ 131 ಸೇರಿ 133 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 133 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,64,835ಕ್ಕೆ ಏರಿಕೆಯಾಗಿದೆ.

ಸಾಂದರ್ಭಿಕ ಚಿತ್ರ
Vishwanath S
Updated On : 26 Jun 2022, 9:08 pm

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 133 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,64,835ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,072 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 11,739 ಹೊಸ ಕೇಸ್ ಪತ್ತೆ, 25 ಮಂದಿ ಸಾವು

Advertisement

Advertisement

ಬೆಂಗಳೂರಿನಲ್ಲಿ ಇಂದು 131 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,99,823ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 517 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,20,283ಕ್ಕೆ ಏರಿಕೆಯಾಗಿದೆ. ಇನ್ನು 4,438 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement