ರಾಜ್ಯ

ಸರ್ಕಾರ ರಚಿಸಲು ಶಿವಸೇನೆ ಬಂಡಾಯ ಶಾಸಕರಿಗೆ ಬಿಜೆಪಿ ಬೆಂಬಲ: ಮುರುಗೇಶ್ ನಿರಾಣಿ

Manjula VN

ಕಲಬುರಗಿ: ‘ಅವಕಾಶಗಳು ಬಾಗಿಲು ತಟ್ಟಿದಾಗ ಕಣ್ಣು ಮುಚ್ಚಿಕೊಂಡಿರುವ ಸನ್ಯಾಸಿಗಳ ಪಕ್ಷ ಬಿಜೆಪಿಯಲ್ಲ’ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಶನಿವಾರ ಹೇಳಿದ್ದಾರೆ.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕುರಿತು ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಶಿವಸೇನೆ ಬಂಡಾಯ ಶಾಸಕರು ಸಮ್ಮಿಶ್ರ ಸರ್ಕಾರ ರಚಿಸಲು ಬಿಜೆಪಿಯ ಬೆಂಬಲವನ್ನು ಕೋರಿದರೆ ನಾವು ಅವರನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ಮತ್ತು ಶಿವಸೇನೆ 25 ವರ್ಷಗಳಿಂದ ಮೈತ್ರಿಯಲ್ಲಿದ್ದು ಎರಡೂ ಪಕ್ಷಗಳ ಸಿದ್ಧಾಂತಗಳು ಒಂದೇ ಆಗಿರುವುದರಿಂದ ಇದು ಅನೈತಿಕವಲ್ಲ. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಸಮ್ಮಿಶ್ರ ಸರ್ಕಾರವು ಅನೈತಿಕವಾಗಿದೆ, ಏಕೆಂದರೆ ಎಲ್ಲಾ ಮೂರು ಪಕ್ಷಗಳ ಸಿದ್ಧಾಂತಗಳು ವಿಭಿನ್ನವಾಗಿವೆ ಎಂದು ತಿಳಿಸಿದರು.

ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳ ಶಾಸಕರಿಗೆ ಆದ್ಯತೆ ನೀಡಿದ ಹಿನ್ನೆಲೆಯಲ್ಲಿ ಶಿವಸೇನೆ ನಾಯಕರು ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದಾರೆ, ಇದೀಗ ಅಧಿಕಾರಕ್ಕೆ ಬರಲು ಬಿಜೆಪಿ ಜೊತೆಗೆ ಸರ್ಕಾರ ರಚಿಸಲು ಮುಂದಾಗಿದ್ದಾರೆ. ಬಂಡಾಯ ನಾಯಕರು ಬಿಜೆಪಿಯೊಂದಿಗೆ ಕೈಜೋಡಿಸಿದ್ದೇ ಆದರೆ, ಮಹಾರಾಷ್ಟ್ರದಲ್ಲಿ ಉತ್ತಮ ಆಡಳಿತ ನಡೆಸುತ್ತೇವೆಂದಿದ್ದಾರೆ. 

SCROLL FOR NEXT