ರಾಜ್ಯ

ಕೊರೋನಾ ದಿಢೀರ್ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 592 ಸೇರಿ ರಾಜ್ಯದಲ್ಲಿ 617 ಮಂದಿಗೆ ಪಾಸಿಟಿವ್; ಸಾವು ಶೂನ್ಯ

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 617 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,65,452ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40072 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 592 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,00,415ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 767 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,21,050ಕ್ಕೆ ಏರಿಕೆಯಾಗಿದೆ. ಇನ್ನು 4288 ಸಕ್ರಿಯ ಪ್ರಕರಣಗಳಿವೆ.

SCROLL FOR NEXT