ಎಸ್. ಎಂ ಕೃಷ್ಣಗೆ ಪ್ರಶಸ್ತಿ ಪ್ರಧಾನ 
ರಾಜ್ಯ

ಕೆಂಪೇಗೌಡರು ಯಾರೊಬ್ಬರ ಸ್ವತ್ತಲ್ಲ; ಬೆಂಗಳೂರು ನಗರ ಇನ್ನಷ್ಟು ಬೆಳೆಯಬೇಕು: ಎಸ್.ಎಂ.ಕೃಷ್ಣ

ಜಗತ್ತಿನ ಗಮನ ಸೆಳೆಯುತ್ತಿರುವ ಬೆಂಗಳೂರು ನಗರ ಇನ್ನಷ್ಟು ಬೆಳೆಯಬೇಕು. ಆ ದಿಸೆಯಲ್ಲಿ ರಾಜ್ಯ ಸರ್ಕಾರ ದೃಢವಾದ ಹೆಜ್ಜೆಗಳನ್ನು ಇಡಬೇಕು ಎಂದು ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಹೇಳಿದರು. 

ಬೆಂಗಳೂರು: ಜಗತ್ತಿನ ಗಮನ ಸೆಳೆಯುತ್ತಿರುವ ಬೆಂಗಳೂರು ನಗರ ಇನ್ನಷ್ಟು ಬೆಳೆಯಬೇಕು. ಆ ದಿಸೆಯಲ್ಲಿ ರಾಜ್ಯ ಸರ್ಕಾರ ದೃಢವಾದ ಹೆಜ್ಜೆಗಳನ್ನು ಇಡಬೇಕು ಎಂದು ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಹೇಳಿದರು. 

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತ್ಯುತ್ಸವದಲ್ಲಿ 'ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿ' ಸ್ವೀಕರಿಸಿ ಮಾತನಾಡಿದರು. 1998-99ರಲ್ಲಿ ರಾಷ್ಟ್ರದ ಸಿಲಿಕಾನ್ ಕೇಂದ್ರ ಯಾವ ನಗರ ಆಗಬೇಕು ಎಂಬ ವಿಷಯದಲ್ಲಿ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ತೀವ್ರ ಪೈಪೋಟಿ ಇತ್ತು. ಅಂತಿಮವಾಗಿ ಬೆಂಗಳೂರು ಯಶಸ್ಸು ಪಡೆಯಿತು. ಅದನ್ನು ಉಳಿಸಿಕೊಂಡು ಹೋಗಬೇಕಿದೆ ಎಂದರು. 

ದೇಶದ ಅತ್ಯಂತ ಹಿರಿಯ ಸ್ವಾತಂತ್ರ್ಯ ಯೋಧ ಕೆಂಪೇಗೌಡ ಎಂದು ಎಸ್ ಎಂ ಕೃಷ್ಣ ಬಣ್ಣಿಸಿದರು. ಬೆಂಗಳೂರನ್ನು ಸುಂದರವಾಗಿ ಮಾಡಲು ಅವರು ಮುಂದಾಗಿದ್ದರು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಇಟ್ಟಿದ್ದಕ್ಕೆ ಅಂದಿನ ಪ್ರಧಾನಿಯಾಗಿದ್ದ ಮನಹೋಹನ್ ಸಿಂಗ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು‌.

ಕೆಂಪೇಗೌಡ ಅವರು ಬೆಂಗಳೂರಿನ ದಿಕ್ಕು ದೆಸೆಗಳನ್ನು ನಿರ್ಣಯಿಸಿದವರು. ಅವರು ಬೆಂಗಳೂರು ಬಗ್ಗೆ ದೊಡ್ಡ ಕನಸನ್ನು ಹೊಂದಿದ್ದರು. ಕೆಂಪೇಗೌಡರು ಯಾರೇ ಒಬ್ಬರ ಸ್ವತ್ತಲ್ಲ. ಅವರು ಕುವೆಂಪು ಹೇಳಿದ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದ ಜನರ ಸ್ವತ್ತು ಎಂದರು‌. ಬೆಂಗಳೂರು ಜನರು ಎಲ್ಲ ಒತ್ತಡಕ್ಕೆ ಮಣಿಯದೆ ನಿಂತು‌ ಬೆಂಗಳೂರು ಕಟ್ಟಿದ್ದಾರೆ. ಬೆಂಗಳೂರು ಸಿಲಿಕಾನ್ ಸಿಟಿ ಆಗಲು ಲಕ್ಷಾಂತರ ಯುವಕ-ಯುವತಿಯರ ಕಮಿಟ್ಮೆಂಟ್, ಶೃದ್ಧೆ ಇದರ ಹಿಂದಿದೆ ಎಂದು ಸ್ಮರಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!