ತ್ರಿಲೋಕ್ ಚಂದ್ರ 
ರಾಜ್ಯ

'ಕಡ್ಡಾಯ ಮಾಸ್ಕ್' ಗಂಭೀರತೆ ಪರಿಗಣಿಸದ ಜನ: 'ದಂಡ' ಹಾಕಲು ಬಿಬಿಎಂಪಿ ಚಿಂತನೆ!

ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮಾಸ್ಕ್ ಕಡ್ಡಾಯಗೊಳಿಸಿದ ನಂತರ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 'ದಂಡ' ಹಾಕುವ ಬಗ್ಗೆಯೂ ಚಿಂತಿಸುತ್ತಿದೆ.

ಬೆಂಗಳೂರು: ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮಾಸ್ಕ್ ಕಡ್ಡಾಯಗೊಳಿಸಿದ ನಂತರ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 'ದಂಡ' ಹಾಕುವ ಬಗ್ಗೆಯೂ ಚಿಂತಿಸುತ್ತಿದೆ.

ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿದಿನ 17,000 ಪರೀಕ್ಷೆಗಳನ್ನು ಮಾಡಲಾಗುತ್ತದೆ. ಅದರಲ್ಲಿ 600 ರಿಂದ 700 ಪ್ರಕರಣಗಳು ಪತ್ತೆಯಾಗುತ್ತಿವೆ. ಗಂಭೀರ ಪರಿಸ್ಥಿತಿ ಇಲ್ಲದಿರುವುದರಿಂದ ಮನೆಯಲ್ಲೇ ಐಸೋಲೇಷನ್ ಆಗುತ್ತಿದ್ದು  ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

'ಕೇವಲ 60 ಪ್ರಕರಣಗಳು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು 10 ಇತರರು ವಿವಿಧ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೀನೋಮ್ ಅನುಕ್ರಮವೂ ಸಹ ನಡೆಯುತ್ತಿದೆ ಎಂದು ತ್ರಿಲೋಕ್ ಚಂದ್ರ ಹೇಳಿದರು.

ಕಡ್ಡಾಯ ಮಾಸ್ಕ್ ನಿಯಮವನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸದಿರುವುದು ಕಂಡುಬಂದಿರುವುದರಿಂದ ದಂಡ ಹಾಕುವಂತೆ ತಾಂತ್ರಿಕ ಸಲಹಾ ಸಮಿತಿಯು ಸೂಚಿಸಿದ್ದು ಮಹದೇವಪುರ ವಲಯದಲ್ಲಿ ಪ್ರಕರಣಗಳು ಹೆಚ್ಚಿರುವುದರಿಂದ ಲಸಿಕೆ ಮತ್ತು ಬೂಸ್ಟರ್ ಡೋಸ್ ಹೆಚ್ಚಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಆಯುಕ್ತರು ಒತ್ತಿ ಹೇಳಿದರು.

ಪಾಲಿಕೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿದ್ದು, ನಿರ್ಧಾರವನ್ನು ಸರ್ಕಾರಕ್ಕೆ ಬಿಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT