ಪ್ರಧಾನಿ ಮೋದಿ 
ರಾಜ್ಯ

40% ಕಮಿಷನ್ ಆರೋಪ: ಪ್ರಧಾನಿ ಕಚೇರಿಯಿಂದ ಕೆಂಪಣ್ಣಗೆ ಕರೆ?; ಭ್ರಷ್ಟರಲ್ಲಿ ನಡುಕ!

ರಾಷ್ಟ್ರ ರಾಜಧಾನಿ ದೆಹಲಿಯಿಂದ ಬಂದ ಒಂದು ದೂರವಾಣಿ ಕರೆ ರಾಜ್ಯ ರಾಜಕಾರಣಗಳಲ್ಲಿ ನಡುಕ ಉಂಟು ಮಾಡಿದೆ. 40% ಕಮಿಷನ್ ಆರೋಪ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವಾಗಲೇ ಈ ಕಮಿಷನ್ ಕರೆ ಭ್ರಷ್ಟರ‌ ಎದೆಯಲ್ಲೂ ಆತಂಕ ಹುಟ್ಟು ಹಾಕಿದೆ.

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಿಂದ ಬಂದ ಒಂದು ದೂರವಾಣಿ ಕರೆ ರಾಜ್ಯ ರಾಜಕಾರಣಗಳಲ್ಲಿ ನಡುಕ ಉಂಟು ಮಾಡಿದೆ. 40% ಕಮಿಷನ್ ಆರೋಪ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವಾಗಲೇ ಈ ಕಮಿಷನ್ ಕರೆ ಭ್ರಷ್ಟರ‌ ಎದೆಯಲ್ಲೂ ಆತಂಕ ಹುಟ್ಟು ಹಾಕಿದೆ.

ದೂರುದಾರರಿಗೆ ಮಾಹಿತಿ ನೀಡುವಂತೆ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣಗೆ ಪ್ರಧಾನಿ ಕಚೇರಿಯಿಂದ ಕರೆ ಬಂದಿದೆ ಎನ್ನಲಾಗುತ್ತಿದೆ. ಈ ಹಿಂದೆ ರಾಜ್ಯ ಸರಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿ ಪ್ರಧಾನಿಗೆ ಕೆಂಪಣ್ಣ ದೂರು ನೀಡಿದ್ದರು. “ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸಲಿದ್ದಾರೆ. ಭ್ರಷ್ಟಾಚಾರದ ದಾಖಲೆ ನೀಡುವಂತೆ” ಪ್ರಧಾನಿ ಕಚೇರಿಯಿಂದ ಕರೆ ಮಾಡಲಾಗಿತ್ತು ಎನ್ನಲಾಗುತ್ತಿದೆ.

ಮೋದಿ ಬೆಂಗಳೂರಿಗೆ ಬರುವ ಮುನ್ನ ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ವರದಿ ತರಿಸಿಕೊಂಡಿತ್ತು. ಈ ಬಗ್ಗೆನೂ ತನಿಖೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತನಿಖೆಗೆ ಗೃಹ ಇಲಾಖೆಯ ತಂಡ ಬೆಂಗಳೂರಿಗೆ ಬರೋ ಸಾಧ್ಯತೆ ಇದೆ. ಗುತ್ತಿಗೆದಾರರ‌ ಸಂಘವೂ ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಆರೋಪ ಮಾಡಿತ್ತು. ದಾಖಲೆಯನ್ನು ಸಿದ್ದಪಡಿಸಿಕೊಳ್ಳಲು ಪ್ರಧಾನಿ ಕಾರ್ಯಾಲಯ ಸೂಚಿಸಿದೆ ಎಂದು ಹೇಳಲಾಗಿದ್ದು, ಕೆಂಪಣ್ಣ ಅವರು ಪ್ರಧಾನಿ ಕಚೇರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗಳ ಮಧ್ಯೆ ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ನನಗೆ ಪ್ರಧಾನಿಯವರ ಕಚೇರಿಯಿಂದ ಕರೆ ಬಂದಿಲ್ಲ. ಯಾವುದೇ ನೊಟೀಸ್ ಕೂಡ ಬಂದಿಲ್ಲ. ನಾನು ಕೆಲಸದ ಮೇಲೆ ಮೈಸೂರಿಗೆ ಬಂದಿದ್ದೆ. ನನ್ನ ಆಫೀಸಿಗೆ ಒಬ್ಬರು ಆಗಮಿಸಿದ್ದರಂತೆ. ಅವರು ಕೆಲವು ದಾಖಲೆಗಳನ್ನ ಕೇಳಿದ್ದಾರೆ. ಬಳಿಕ ಆಫೀಸಿನಿಂದ ನನಗೆ ಕರೆ ಮಾಡಿ ತಿಳಿಸಿದ್ದಾರೆ ಎಂದು ಹೇಳಿದರು.

ಯಾರೋ ನಿಮ್ಮನ್ನ ಕೇಳಿಕೊಂಡು ಬಂದಿದ್ದಾರೆ. ನಿಮ್ಮ‌ ಜೊತೆ ಮಾತನಾಡಬೇಕೆಂದು ಕೇಳ್ತಿದ್ದಾರೆ ಎಂದು ಕಚೇರಿ ಸಿಬ್ಬಂದಿ ತಿಳಿಸಿದರು. ನಾನು‌ ಅವರನ್ನ ಯಾರೆಂದು ವಿಚಾರಿಸಿದೆ ಎಂದು ಹೇಳಿದ ಕೆಂಪಣ್ಣ, ಹೋಂ ಡಿಪಾರ್ಟಮೆಂಟ್ ನಿಂದ ಬಂದಿದ್ದೇವೆ ಎಂದ್ರು. ನಿಮ್ಮನ್ನ ಭೇಟಿಯಾಗಬೇಕು ಎಂದರು. ನಾನು ಇಂದು ಸಿಗ್ತೇನೆ ಎಲ್ಲಿಗೆ ಬರಬೇಕೆಂದು ಕೇಳಿದ್ದೇನೆ. ಅವರು ಹೇಳಿದ ಜಾಗಕ್ಕೆ ನಾವು ಹೋಗ್ತೇವೆ. ನಮ್ಮ ಕಾರ್ಯದರ್ಶಿ ಕರೆದುಕೊಂಡು‌ ಹೋಗ್ತೇನೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ