ರಾಜ್ಯ

ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 887 ಸೇರಿ ರಾಜ್ಯದಲ್ಲಿ 968 ಮಂದಿಗೆ ಪಾಸಿಟಿವ್; ಒಬ್ಬರು ಸಾವು

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 968 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,66,420ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40073ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 887 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,01,302ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 337 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,21,387ಕ್ಕೆ ಏರಿಕೆಯಾಗಿದೆ. ಇನ್ನು 4918 ಸಕ್ರಿಯ ಪ್ರಕರಣಗಳಿವೆ.

SCROLL FOR NEXT