ಮುರುಗೇಶ್ ನಿರಾಣಿ 
ರಾಜ್ಯ

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿ; 1 ಲಕ್ಷ ನೋಂದಣಿ: ಸಚಿವ ಮುರುಗೇಶ್ ನಿರಾಣಿ

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು,  1 ಲಕ್ಷ ವಾಹನಗಳ ನೋಂದಣಿಯಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು,  1 ಲಕ್ಷ ವಾಹನಗಳ ನೋಂದಣಿಯಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಈ ಕುರಿತಂತೆ ಸಚಿವ ಮುರುಗೇಶ್ ನಿರಾಣಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇದ್ದು, ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಸಚಿವ ನಿರಾಣಿ ಕೂ ಮಾಡಿದ್ದಾರೆ.

ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ.

ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ’ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT