ರಾಜ್ಯ

ಆರೋಪಿಗಳನ್ನು ಬಂಧಿಸುವ ಪೊಲೀಸರು ಬಾಡಿ ಕ್ಯಾಮರಾ ಧರಿಸಿರುವುದನ್ನು ಖಚಿತಪಡಿಸಿಕೊಳ್ಳಿ: ಡಿಜಿಪಿಗೆ ಹೈಕೋರ್ಟ್ ಸೂಚನೆ

Manjula VN

ಬೆಂಗಳೂರು: ಯಾವುದೇ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಅಥವಾ ಇತರೆ ವ್ಯಕ್ತಿಗಳನ್ನು ಬಂಧಿಸುವಾಗ ಪೊಲೀಸರು ಬಾಡಿ ಕ್ಯಾಮೆರಾ ಧರಿಸುವುದನ್ನು ಖಚಿತಪಡಿಸಿಕೊಳ್ಳಿ ಎಂದು ಡಿಜಿಪೆಗೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 
    
ಚೆಕ್‌ಬೌನ್ಸ್ ಪ್ರಕರಣದಲ್ಲಿ ಬಂಧಿತ ವ್ಯಕ್ತಿಯನ್ನು ಕಾನೂನುಬಾಹಿರವಾಗಿ ಕೈಕೋಳ ಹಾಕಿದ್ದಕ್ಕಾಗಿ ಸರ್ಕಾರಕ್ಕೆ 2 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ 30 ವರ್ಷದ ಸುಪ್ರಿತ್ ಇಶ್ವತ್ ದಿವಟೆ, ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಕೈಕೋಳ ಹಾಕಿದ್ದಕ್ಕಾಗಿ ಪರಿಹಾರ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠ ಈ ನಿರ್ದೇಶನ ನೀಡಿದೆ.

ವ್ಯಕ್ತಿಯು ರೂ.25 ಲಕ್ಷ ಪರಿಹಾರವನ್ನು ಕೇಳಿದ್ದು, ವಿದ್ಯಾರ್ಥಿಯಾಗಿರುವ ಪರಿಣಾಮ ಇದನ್ನು ಪರಿಗಣಿಸಲಾಗುವುದಿಲ್ಲ. ಎನ್'ಬಿಡಬ್ಲ್ಯೂ ಸೂಚನೆಯಂತೆ ಬಂಧನಕ್ಕೊಳಪಡಿಸಲಾಗಿದೆ. ಬಂಧನಕ್ಕೊಳಪಡಿಸಿರುವುದು ಸರಿಯಾಗಿಯೇ ಆದರೆ, ಕೈಕೋಳ ಹಾಕಿರುವುದನ್ನು ಇಲ್ಲಿ ಪ್ರಶ್ನಿಸಲಾಗಿದೆ. ಕೈಕೋಳ ಹಾಕಿದ್ದಕ್ಕಾಗಿ ವ್ಯಕ್ತಿಗೆ ರೂ.2 ಲಕ್ಷ ಪರಿಹಾರ ನೀಡುವುದು ಸೂಕ್ತವೆಂದು ನ್ಯಾಯಾಲಯದ ಹೇಳಿದೆ. 

ಚೆಕ್ ಅಮಾನ್ಯ ಪ್ರಕರಣದಲ್ಲಿ ನೀಡಲಾದ ವಾರಂಟ್ ಆಧಾರದ ಮೇಲೆ ವ್ಯಕ್ತಿಯನ್ನು ಬಂಧಿಸಿದ ನಂತರ ಕಾನೂನು ಬಾಹಿರವಾಗಿ ಕೈಕೋಳ ಹಾಕಿರುವುದನ್ನು ಗಮನಿಸಿದ ಹೈಕೋರ್ಟ್, ವ್ಯಕ್ತಿಯನ್ನು ಬಂಧಿಸಲು ಅಧಿಕಾರ ಹೊಂದಿರುವ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಬಾಡಿ ಕ್ಯಾಮೆರಾಗಳನ್ನು ಒದಗಿಸಬೇಕು ಎಂದು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದೆ. ಇದರಿಂದ ಬಂಧನದ ಪ್ರತಿಯೊಂದು ದೃಶ್ಯವೂ ದಾಖಲಾಗಲಿದೆ ಎಂದು ತಿಳಿಸಿದೆ. 

ಬಂಧನದ ನಿರ್ದಿಷ್ಟ ಸಮಯದಲ್ಲಿ ನಡೆಯುವ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲು ಕ್ಯಾಮೆರಾಗಳಲ್ಲಿ ಮೈಕ್ರೊಫೋನ್ ಅನ್ನು ಕೂಡ ಅಳವಡಿಸಬೇಕು ಮತ್ತು ಬಂಧನ ಪ್ರಕ್ರಿಯೆಯ ಆಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್ ಎರಡನ್ನೂ ಕನಿಷ್ಠ ರೆಕಾರ್ಡಿಂಗ್ ದಿನಾಂಕದಿಂದ ಒಂದು ವರ್ಷ ಅವಧಿಯವರೆಗೆ ಉಳಿಸಿಕೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಈ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಮುಖ್ಯಸ್ಥರು ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನ (ಎಸ್ ಒಪಿ)ಯನ್ನು ಸಿದ್ಧಪಡಿಸಬೇಕು ಮತ್ತು ಅಂತಹ ಅಧಿಕಾರಿಗಳಿಗೆ ಬಾಡಿ ಕ್ಯಾಮೆರಾಗಳನ್ನು ಬಳಸುವ ಬಗ್ಗೆ ಸೂಕ್ತ ತರಬೇತಿಯನ್ನು ನೀಡಬೇಕು ಎಂದು ಹೈಕೋರ್ಟ್ ಸೂಚಿಸಿದೆ.

SCROLL FOR NEXT