ಮೈಶುಗರ್ ಕಾರ್ಖಾನೆಗೆ ಭೇಟಿ ನೀಡಿ ದುರಸ್ತಿ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು. 
ರಾಜ್ಯ

ಮೈಶುಗರ್ ಕಾರ್ಖಾನೆ ಆಗಸ್ಟ್‌ನಲ್ಲಿ ಪುನರಾರಂಭ: ಸಚಿವ ನಾರಾಯಣಗೌಡ

ಜುಲೈ ಅಂತ್ಯದೊಳಗೆ ಮೈಶುಗರ್ ಕಾರ್ಖಾನೆ ದುರಸ್ತಿ ಕಾರ್ಯ ಪೂರ್ಣಗೊಳಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬುಧವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಂಡ್ಯ: ಜುಲೈ ಅಂತ್ಯದೊಳಗೆ ಮೈಶುಗರ್ ಕಾರ್ಖಾನೆ ದುರಸ್ತಿ ಕಾರ್ಯ ಪೂರ್ಣಗೊಳಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬುಧವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರೊಂದಿಗೆ ಮೈಶುಗರ್ ಕಾರ್ಖಾನೆಗೆ ಭೇಟಿ ನೀಡಿ ದುರಸ್ತಿ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದರು.

ಮೈಶುಗರ್ ಕಾರ್ಖಾನೆ ಮಂಡ್ಯ ರೈತರ ಜೀವನಾಡಿ.. ಆದಷ್ಟು ಬೇಗ ಕಾರ್ಖಾನೆ ಆರಂಭವಾಗಿ ಕಬ್ಬು ಅರೆಯಬೇಕು ಎಂಬುಂದು ಮಂಡ್ಯ ಜಿಲ್ಲೆಯ ರೈತರ ಕನಸು.. ಹಾಗಾಗಿ ತ್ವರಿತಗತಿಯಲ್ಲಿ ದುರಸ್ತಿ ಕಾರ್ಯಗಳನ್ನು ನಡೆಸಿ, ಜುಲೈ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚಿಸಿದರು.

ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿರುವ ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ನಮ್ಮ ಸರ್ಕಾರದ ಇಚ್ಛಾಶಕ್ತಿಯೇ ಕಾರಣ.‌ ಅದಕ್ಕೆ ಅಗತ್ಯವಿರುವ ಹಣವನ್ನು ಕೂಡ ಬಿಡುಗಡೆ ಮಾಡಲಾಗಿದೆ. ಆಗಸ್ಟ್ ಎರಡನೇ ವಾರದಲ್ಲಿ ಕಬ್ಬು ಅರೆಯುವುದನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಹಾಗಾಗಿ, ಜುಲೈ ಅಂತ್ಯದೊಳಗೆ ದುರಸ್ತಿ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು ನೀಡಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!