ಸಾಂದರ್ಭಿಕ ಚಿತ್ರ 
ರಾಜ್ಯ

ತುಂಡಾದ ವೈರ್: ಈಜಲು ಕೃಷಿ ಹೊಂಡಕ್ಕೆ ಇಳಿದಿದ್ದ ಇಬ್ಬರ ದುರ್ಮರಣ; ರಾಮನಗರದಲ್ಲಿ ದುರ್ಘಟನೆ

ಬಿಡದಿ ಬಳಿಯ ಹೊರವಲಯದ ಕೃಷಿ ಹೊಂಡದಲ್ಲಿ ಸ್ನೇಹಿತನೊಂದಿಗೆ ಈಜಲು ಹೋಗಿದ್ದ ಎಚ್‌ಎಸ್‌ಆರ್‌ ಲೇಔಟ್‌ ನಿವಾಸಿ 29 ವರ್ಷದ ಖಾಸಗಿ ಸಂಸ್ಥೆಯ ಉದ್ಯೋಗಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರು: ಬಿಡದಿ ಬಳಿಯ ಹೊರವಲಯದ ಕೃಷಿ ಹೊಂಡದಲ್ಲಿ ಸ್ನೇಹಿತನೊಂದಿಗೆ ಈಜಲು ಹೋಗಿದ್ದ ಎಚ್‌ಎಸ್‌ಆರ್‌ ಲೇಔಟ್‌ ನಿವಾಸಿ 29 ವರ್ಷದ ಖಾಸಗಿ ಸಂಸ್ಥೆಯ ಉದ್ಯೋಗಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್ ನಿವಾಸಿ ಶೃತಿ ಕುಮಾರ್ (30) ಮತ್ತು ಹರೀಶ್ (22) ಮೃತಪಟ್ಟವರು. ಶೃತಿ ಕುಮಾರ್ ತಮ್ಮ ನಾಲ್ವರು ಸ್ನೇಹಿತರೊಂದಿಗೆ ತೌಟನಹಳ್ಳಿಯ ಚಿಕ್ಕಪ್ಪನ ಮನೆಗೆ ಬಂದಿದ್ದರು. ಮಧ್ಯಾಹ್ನ ಊಟದ ನಂತರ ಸ್ನೇಹಿತರೊಂದಿಗೆ ಗ್ರಾಮದ ಹೊರವಲಯದಲ್ಲಿ ಚಿಕ್ಕಪ್ಪನ ತೋಟದಲ್ಲಿದ್ದ ಕೃಷಿ ಹೊಂಡಕ್ಕೆ ಈಜಲು ತೆರಳಿದಾಗ ಈ ದುರಂತ ನಡೆದಿದೆ. ಭಾನುವಾರದ ರಜೆ ಕಳೆಯಲು ಬೆಂಗಳೂರಿನಿಂದ  ಬಂದಿದ್ದರು. ಇವರೆಲ್ಲರೂ ಮದ್ಯ ಸೇವನೆ ಮಾಡಿದ್ದರು ಎನ್ನಲಾಗಿದೆ.

ಬೋರೇಗೌಡ ಎಂಬುವರಿಗೆ ಸೇರಿದ 15 ಅಡಿ ಆಳದ ಹೊಂಡದಲ್ಲಿ ವೈರ್  ಆಸರೆ ಪಡೆದು ಇಬ್ಬರು ಈಜುತ್ತಿದ್ದರು. ವೈರ್ ಕಟ್ ಆದ ಕಾರಣ ಇಬ್ಬರೂ ಮುಳುಗಲು ಪ್ರಾರಂಭಿಸಿದರು,  ಅವರ ಜೊತೆಗಿದ್ದ ಇತರರು ಅವರನ್ನು ರಕ್ಷಿಸಲು ನೆರೆಹೊರೆಯವರ ಸಹಾಯ ಪಡೆಯಲು ಓಡಿ ಹೋಗಿದ್ದಾರೆ. ಆದರೆ ಅವರು ಬರುವಷ್ಟರಲ್ಲಿ ದುರಂತ ಸಂಭವಿಸಿತ್ತು.

ಅವಿವಾಹಿತ ಶ್ರುತಿಕುಮಾರ್ ಕುಡಿತಕ್ಕೆ ದಾಸನಾಗಿದ್ದ.  ಪ್ರತಿ ವಾರಾಂತ್ಯದಲ್ಲಿ ತನ್ನ ಸ್ನೇಹಿತರೊಂದಿಗೆ ನಗರದ ಹೊರವಲಯದಲ್ಲಿರುವ ಚಿಕ್ಕಮ್ಮನ ಫಾರ್ಮ್‌ಹೌಸ್‌ಗೆ ಹೋಗಿ ಭಾನುವಾರ ರಾತ್ರಿ ವಾಪಸಾಗುತ್ತಿದ್ದ.  ಇವರಿಗೆ ಈಜು ಬರುತ್ತಿರಲಿಲ್ಲ ಎಂದು ಪೋಲೀಸರು ತಿಳಿಸಿದ್ದಾರೆ.

ಕೃಷಿಹೊಂಡದ ಆಳ ಅಗಲ ಅರಿಯದ ಐವರು ಮೇಲಿನಿಂದ ನೀರಿಗೆ ಧುಮಕಿದ್ದರು. ಶೃತಿ ಕುಮಾರ್ ಹಾಗೂ ಹರೀಶ್ ಮೇಲೆ ಬರಲು ಸಾಧ್ಯವಾಗದೇ ನೀರಿನಲ್ಲಿ ಮುಳಗಿದ್ದಾರೆ. ಮೂವರು ಈಜಿ ಹೊರಬಂದಿದ್ದಾರೆ. ಇಬ್ಬರನ್ನು ಕಾಪಾಡಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಹರೀಶ್ ಸ್ಥಳದಲ್ಲೇ ಮೃತಪಟ್ಟರೆ, ಶೃತಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಲ್ಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT