ಸಂಗ್ರಹ ಚಿತ್ರ 
ರಾಜ್ಯ

ಮಾಸ್ಕ್ ಧರಿಸದೆ ನಿಯಮ ಉಲ್ಲಂಘಿಸುತ್ತಿದ್ದೀರಾ? ಶೀಘ್ರದಲ್ಲೇ 250 ರೂ. ದಂಡ ಕಟ್ಟಲು ಸಿದ್ಧರಾಗಿ...

ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೆ ನಿಯಮ ಉಲ್ಲಂಘಿಸುವವರಿಗೆ ಶೀಘ್ರದಲ್ಲೇ ರೂ.250 ದಂಡ ವಿಧಿಸಲು ಬಿಬಿಎಂಪಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೆ ನಿಯಮ ಉಲ್ಲಂಘಿಸುವವರಿಗೆ ಶೀಘ್ರದಲ್ಲೇ ರೂ.250 ದಂಡ ವಿಧಿಸಲು ಬಿಬಿಎಂಪಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. 

ಈ ಸಂಬಂಧ ಈಗಾಗಲೇ ರಾಜ್ಯ ಆರೋಗ್ಯ ಆಯುಕ್ತ ಡಿ ರಂದೀಪ್ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಅವರಿಗೆ ಪ್ರಸ್ತಾವನೆ ಕಳುಹಿಸಿದ್ದು, ಬಿಬಿಎಂಪಿ ಮತ್ತು ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ನಿಯಮ ಜಾರಿಗೆ ತರುವಂತೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 

ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ (ಟಿಎಸಿ) ಶಿಫಾರಸುಗಳನ್ನು ಆಧರಿಸಿ ಕ್ರಮಗಳ ಕೈಗೊಳ್ಳಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

4,682 ಪ್ರಕರಣಗಳೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ದೇಶದಲ್ಲಿಯೇ ಬೆಂಗಳೂರು ಮೂರನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಜಿಗಿದಿದೆ. ಮುಂಬೈ ಅಗ್ರಸ್ಥಾನದಲ್ಲಿದೆ.

ಕೇಂದ್ರ ಗೃಹ ಸಚಿವಾಲಯವು ಮಾರ್ಚ್ 31 ರಿಂದ ಕೋವಿಡ್ ನಿಯಂತ್ರಣ ಕ್ರಮಗಳಿಗಾಗಿ ವಿಪತ್ತು ನಿರ್ವಹಣಾ ಕಾಯ್ದೆಯನ್ನು ಬಳಸುವುದನ್ನು ನಿಲ್ಲಿಸಿದೆ, ಆದರೆ, ಮುಖ್ಯ ಕಾರ್ಯದರ್ಶಿಯ ಅಧೀನದ ಸಮಿತಿಯು ಇನ್ನೂ ದಂಡವನ್ನು ವಿಧಿಸಲು ಕಾಯಿದೆಯನ್ನು ಬಳಸುವ ಅಧಿಕಾರವನ್ನು ಹೊಂದಿರುವುದರಿಂದ, ರಾಜ್ಯ ಆರೋಗ್ಯ ಆಯುಕ್ತರು ಮುಖ್ಯ ಕಾರ್ಯದರ್ಶಿಗಳಿಗೆ ಪ್ರಸ್ತಾವನೆ ಕಳುಹಿಸಿದ್ದಾರೆ. 

ಮಂಗಳವಾರ, ಬೆಂಗಳೂರಿನಲ್ಲಿ 887 ಸೇರಿದಂತೆ ರಾಜ್ಯದಲ್ಲಿ 968 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಐಸಿಯುನಲ್ಲಿ ಆರು ಸೇರಿದಂತೆ ಆಸ್ಪತ್ರೆಗೆ ದಾಖಲಾದ ರೋಗಿಗಳ ಸಂಖ್ಯೆ 81 ಆಗಿದೆ. ರಾಜ್ಯ ರಾಜಧಾನಿಯು 27 ಕ್ಲಸ್ಟರ್‌ಗಳನ್ನು ಹೊಂದಿದ್ದು, ಇವೆಲ್ಲವೂ ಮಹದೇವಪುರ ವಲಯದ ಅಪಾರ್ಟ್‌ಮೆಂಟ್‌ಗಳಲ್ಲಿದ್ದು, ಇಲ್ಲಿ ಸಾಕಷ್ಟು ಐಟಿ ಉದ್ಯೋಗಿಗಳು ವಾಸಿಸುತ್ತಿದ್ದಾರೆ.

ಈ ಕ್ಲಸ್ಟರ್‌ಗಳಲ್ಲಿ, 26 ಐದಕ್ಕಿಂತ ಕಡಿಮೆ ಪ್ರಕರಣಗಳನ್ನು ಹೊಂದಿವೆ. ಕಳೆದ ಒಂದು ವಾರದಿಂದ ಬೆಳ್ಳಂದೂರು, ಕಾಡುಗೋಡಿ, ದೊಡ್ಡ ನೆಕ್ಕುಂಡಿ, ವರ್ತೂರು, ಎಚ್‌ಎಸ್‌ಆರ್ ಲೇಔಟ್, ಹೊರಮಾವು, ಹಗದೂರು, ಹುಡಿ, ಬೇಗೂರು ಮತ್ತು ಗರುಡಾಚಾರ್ ಪಾಳ್ಯ ವಾರ್ಡ್‌ಗಳಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಕೋವಿಡ್ ಪ್ರಕರಣಗಳ ಸಂಖ್ಯೆಗೆ ಅನುಗುಣವಾಗಿ ನಗರದಲ್ಲಿ ಮಾಸ್ಕ್ ಉಲ್ಲಂಘನೆಗಾಗಿ ದಂಡದ ಷರತ್ತುಗಳನ್ನು ಏಳು ದಿನಗಳಲ್ಲಿ ಪರಿಚಯಿಸಲು ಜೂನ್ 6 ರಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. 

ಜೂನ್ 10 ರಂದು, ಆರೋಗ್ಯ ಇಲಾಖೆಯು ಮಾಲ್‌ಗಳು, ಹೋಟೆಲ್‌ಗಳು, ಕೆಲಸದ ಸ್ಥಳಗಳು ಮತ್ತು ಇತರ ಮುಚ್ಚಿದ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ಪ್ರವೇಶವನ್ನು ನಿರಾಕರಿಸಬೇಕು ಎಂದು ಆದೇಶವನ್ನು ಹೊರಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT