ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ 7 ಸಾವು, ಬೆಂಗಳೂರಿನಲ್ಲಿ 158 ಸೇರಿ 217 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 217 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,43,325ಕ್ಕೆ ಏರಿಕೆಯಾಗಿದೆ. 

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಏಳು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40013ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 158 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,80,015ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 301 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,00,428ಕ್ಕೆ ಏರಿಕೆಯಾಗಿದೆ. ಇನ್ನು 2846 ಸಕ್ರಿಯ ಪ್ರಕರಣಗಳಿವೆ.

SCROLL FOR NEXT