ರಾಜ್ಯ

ಕರ್ನಾಟಕ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಸುಳಿವು ನೀಡಿದ ಸಿಎಂ ಬೊಮ್ಮಾಯಿ

Srinivasamurthy VN

ಯಾದಗಿರಿ: ಮುಂದಿನ ದಿನಗಳಲ್ಲಿ ಶಾಲಾ ಪಠ್ಯಕ್ರಮದಲ್ಲಿ 'ಭಗವದ್ಗೀತೆ'ಯನ್ನು ಪರಿಚಯಿಸುವ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸುಳಿವು ನೀಡಿದ್ದಾರೆ.

ಶನಿವಾರ ಶೋರಾಪುರ ತಾಲೂಕಿನ ದೇವತ್ಕಲ್ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ವಿದ್ಯಾರ್ಥಿಗೆ ನೈತಿಕ ಶಿಕ್ಷಣ ಕಲಿಯಲು ನೆರವಾಗುವ ನೈತಿಕ ಉಪದೇಶ ಇರುವುದರಿಂದ ಗುಜರಾತ್ ಸರ್ಕಾರ ಇದೇ ರೀತಿಯ ನಿರ್ಧಾರ ಕೈಗೊಂಡಿದೆ. ಶಿಕ್ಷಣ ಇಲಾಖೆಯು ಈ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಂಪುಟದ ಮುಂದೆ ಮಂಡಿಸಿ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.

ಇದೇ ವೇಳೆ ನೈತಿಕ ಬೋಧನೆ ಭಗವದ್ಗೀತೆಯಲ್ಲಿ ಮಾತ್ರವೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಮುಖ್ಯಮಂತ್ರಿಗಳು ಹಿಂದಿನಂತೆ ನೈತಿಕ ಶಿಕ್ಷಣವನ್ನು ಬೋಧಿಸುವ ಇತರ ಪುಸ್ತಕಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯನ್ನು ಸರ್ಕಾರ ನಿರ್ಲಕ್ಷಿಸಿಲ್ಲ ಮತ್ತು ನಂಜುಂಡಪ್ಪ ಸಮಿತಿ ಶಿಫಾರಸುಗಳ ಪ್ರಕಾರ ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಪಾವಗಡದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಮತ್ತೊಂದು ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ ನೀಡಿದರು.

SCROLL FOR NEXT