ಸಿಎಂ ಬೊಮ್ಮಾಯಿ 
ರಾಜ್ಯ

ಶಾಲಾ ಪಠ್ಯದಲ್ಲಿ ಪುನೀತ್ ರಾಜ್ ಕುಮಾರ್ ವಿಷಯ ಸೇರ್ಪಡೆಗೆ ಹಂತ ಹಂತವಾಗಿ ಕ್ರಮ: ಸಿಎಂ ಬೊಮ್ಮಾಯಿ

ಕನ್ನಡ ರಾಜ್ಯೋತ್ಸವದಂದೇ ಪುನೀತ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕೆಂಬುದು‌‌ ನಮ್ಮ ಇಚ್ಛೆ ಆಗಿತ್ತು. ಅದರಂತೆ ಇಂದೇ ಪ್ರಶಸ್ತಿ ಪ್ರದಾನಿಸುತ್ತಿದ್ದೇವೆ. ಅವರ ಕುರಿತ ವಿಷಯವನ್ನು ಪಠ್ಯದಲ್ಲಿ ಸೇರಿಸುವ ಕುರಿತು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಮಂಗಳವಾರ ಹೇಳಿದ್ದಾರೆ.‌

ಬೆಂಗಳೂರು: ಕನ್ನಡ ರಾಜ್ಯೋತ್ಸವದಂದೇ ಪುನೀತ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕೆಂಬುದು‌‌ ನಮ್ಮ ಇಚ್ಛೆ ಆಗಿತ್ತು. ಅದರಂತೆ ಇಂದೇ ಪ್ರಶಸ್ತಿ ಪ್ರದಾನಿಸುತ್ತಿದ್ದೇವೆ. ಅವರ ಕುರಿತ ವಿಷಯವನ್ನು ಪಠ್ಯದಲ್ಲಿ ಸೇರಿಸುವ ಕುರಿತು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಮಂಗಳವಾರ ಹೇಳಿದ್ದಾರೆ.‌

ಆರ್‌ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯ ಕೋರಿದರು. ಅತ್ಯಂತ ಸಂಭ್ರಮದಿಂದ ರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಇದು ಕೇವಲ‌ ಆಚರಣೆಯಾಗಿ ಉಳಿಯೋದಿಲ್ಲ, ಬದುಕಿನ ಪ್ರತೀ ಕ್ಷಣದಲ್ಲೂ ಕನ್ನಡದ ಡಿಂಡಿಮ ಬಾರಿಸುತ್ತಿದೆ. ಶಿಕ್ಷಣ, ಉದ್ಯೋಗ, ಎಲ್ಲ ರಂಗಗಳಲ್ಲೂ ರಾಜ್ಯ ಮುಂದೆ ಬರಲು ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಅದರ ಹೆಚ್ಚಿನ ಲಾಭವನ್ನು ಕನ್ನಡಿಗರು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಇಂದಿನ ಕರ್ನಾಟಕ ರಾಜ್ಯೋತ್ಸವದ ವಿಶೇಷವೇ ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುತ್ತಿರುವುದು. ನವೆಂಬರ್ 1 ರಂದು ಅವರಿಗೆ ಪ್ರಶಸ್ತಿ ಕೊಡಬೇಕೆಂಬುದು‌‌ ನಮ್ಮ ಇಚ್ಛೆ ಆಗಿತ್ತು. ಅವರು, ಕನ್ನಡದ ನೆಲದಲ್ಲಿ ಹತ್ತು ಹಲವು ಪರೋಪಕಾರ ಕೆಲಸವನ್ನು ಮಾಡಿದಾರೆ. ಎಷ್ಟರ ಮಟ್ಟಿಗೆ ಅಂದರೆ ತಮ್ಮ ಅಂಗಾಂಗಗಳ ದಾನ ಮಾಡಿ ಮಾದರಿಯಾಗಿದ್ದಾರೆ. ಅವರು ತೀರಿ ಹೋದ ಮೇಲೆ ಹಲವರು ಕಣ್ಣು ದಾನ ಮಾಡುತ್ತಿದ್ದಾರೆ. ಪುನೀತ್ ಸಣ್ಣ ವಯಸ್ಸಲ್ಲೇ ಪ್ರೇರಣಾದಾಯಕ ಸಾಧನೆ ಮಾಡಿದರು ಎಂದು ಕೊಂಡಾಡಿದರು.

ಶಾಲಾ ಪಠ್ಯದಲ್ಲಿ ಪುನೀತ್ ರಾಜ್‌ಕುಮಾರ್ ಸಾಧನೆ, ಪ್ರೇರಣೆ ಕುರಿತ ಮಾಹಿತಿ ಸೇರಿಸಬೇಕು ಎನ್ನುವ ಮನವಿಗಳು ಬಂದಿವೆ. ಪಠ್ಯ ಸೇರ್ಪಡೆ ವಿಚಾರ ಸಂಬಂಧ ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಏನೆಲ್ಲ‌ ಸಾಧ್ಯವೋ ಎಲ್ಲವನ್ನೂ ಮಾಡುತ್ತೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT