ರಾಜ್ಯ

ವನ್ಯ ಪ್ರಾಣಿಗಳಿಗೆ ವಿದ್ಯುತ್ ಸ್ಪರ್ಶ: ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿದ ಕರ್ನಾಟಕ ಹೈಕೋರ್ಟ್

Ramyashree GN

ಬೆಂಗಳೂರು: ರಾಜ್ಯದಲ್ಲಿ ಆನೆಗಳು ಮತ್ತು ಇತರ ಕಾಡು ಪ್ರಾಣಿಗಳ ಸಾವಿಗೆ ಕಾರಣವಾಗುವ ಅಕ್ರಮ ವಿದ್ಯುತ್ ಬೇಲಿಗಳ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.

ವಕೀಲ ಅಂಕುಶ ಯೆನ್ನೆಮಜಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.

ವಿದ್ಯುದಾಘಾತದಿಂದ ಆನೆಗಳು ಮೃತಪಟ್ಟ ಸುದ್ದಿ ವರದಿಗಳನ್ನು ಉಲ್ಲೇಖಿಸಿ, 'ಕರ್ನಾಟಕದ ಅರಣ್ಯ ಇಲಾಖೆ ಮತ್ತು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಈಗ ಕರ್ನಾಟಕದ ಹಲವಾರು ಸ್ಥಳಗಳಲ್ಲಿ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಸಂಪರ್ಕಗಳನ್ನು ನೀಡಲಾಗುತ್ತಿರುವ ಬಗ್ಗೆ ತಲೆಕೆಡಿಸಿಕೊಂಡಂತೆ ತೋರುತ್ತಿಲ್ಲ ಎಂದು ಪಿಐಎಲ್‌ನಲ್ಲಿ ಹೇಳಿದೆ.

ರಾಜ್ಯದ ಅರಣ್ಯಗಳಲ್ಲಿ ಸುಮಾರು 6,000 ಆನೆಗಳ ಪೈಕಿ 70 ಆನೆಗಳು 2021ರಲ್ಲಿ ಮೃತಪಟ್ಟಿವೆ. ಅವುಗಳಲ್ಲಿ 15 ವಿದ್ಯುದಾಘಾತ ಸೇರಿದಂತೆ ಅಸ್ವಾಭಾವಿಕ ಕಾರಣಗಳಿಂದಾಗಿ ಎಂದು ಅದು ಆರೋಪಿಸಿದೆ.

ಇಂತಹ ಕಾಡು ಪ್ರಾಣಿಗಳ ಸಾವುಗಳನ್ನು ತಡೆಯಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಪಿಐಎಲ್ ಕೋರಿದೆ.

SCROLL FOR NEXT