ರಾಜ್ಯ

ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ನಗರ ಸಾರಿಗೆ ಶ್ರೇಷ್ಠತೆಯ ಪ್ರಶಸ್ತಿ

Sumana Upadhyaya

ದಾವಣಗೆರೆ: ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆ ಮತ್ತು ದಾಖಲೆಗಳ ನಿರ್ವಹಣೆಯ ಪರಿಣಾಮಕಾರಿ ಅನುಷ್ಠಾನಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ "ನಗರ ಸಾರಿಗೆಯಲ್ಲಿ ಶ್ರೇಷ್ಠತೆಯ ಪ್ರಶಸ್ತಿ" ಲಭಿಸಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ವಿಭಾಗದಲ್ಲಿ ಪ್ರಶಸ್ತಿ ಪಡೆದ ಕರ್ನಾಟಕದ ಏಕೈಕ ನಗರ ದಾವಣಗೆರೆಯಾಗಿದೆ. ಯುಎಂಐ ಸಮ್ಮೇಳನದಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಪ್ರಶಸ್ತಿಯನ್ನು ನೀಡಲಿದ್ದಾರೆ ಎಂದು ವಿಶೇಷ ಕರ್ತವ್ಯ ಅಧಿಕಾರಿ (ಯುಟಿ) ಮತ್ತು ಪದನಿಮಿತ್ತ ಜಂಟಿ ಕಾರ್ಯದರ್ಶಿ ಜೈದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನವೆಂಬರ್ 6 ರಂದು ಕೊಚ್ಚಿಯ ಬೋಲ್ಗಟ್ಟಿ ದ್ವೀಪದಲ್ಲಿ ನಡೆಯಲಿದೆ.

ನಗರದಾದ್ಯಂತ 248 ಎಚ್‌ಡಿ ಸಿಸಿಟಿವಿ ಅಳವಡಿಕೆ, 23 ಜಂಕ್ಷನ್‌ಗಳಲ್ಲಿ ಸಿಗ್ನಲ್ ಲೈಟಿಂಗ್ ಮತ್ತು ಇಂಟೆಲಿಜೆಂಟ್ ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸಿಸ್ಟಂ ಅಳವಡಿಕೆ, ತಾಂತ್ರಿಕ ಉನ್ನತೀಕರಣ ಪ್ರಶಸ್ತಿಗೆ ಪಾತ್ರವಾಗಿದೆ ಎಂದು ಡಿಎಸ್‌ಸಿಎಲ್‌ನ ಎಂಡಿ ರವೀಂದ್ರ ಬಿ ಮಲ್ಲಾಪುರ ಹೇಳಿದರು.

SCROLL FOR NEXT