ಡ್ರೋನ್​ ಪ್ರತಾಪ 
ರಾಜ್ಯ

ಕೈಯಲ್ಲಿ ಸಾಲ್ಡ್ರಿಂಗ್ ಗೇರ್, ಬದಿಯಲ್ಲಿ ಡ್ರೋನ್​ ಕ್ಯಾಮೆರಾ; ಡ್ರೋನ್​ ಪ್ರತಾಪನ ಹೊಸ ಅವತಾರ!

ನಾನೊಬ್ಬ ಯುವ ವಿಜ್ಞಾನಿ, ನಾನು ಡ್ರೋನ್​ ತಯಾರಿಸಿದ್ದೇನೆ ಎಂದು ಹೇಳಿಕೊಂಡು ವ್ಯಾಪಕ ಸುದ್ದಿಗೆ ಗ್ರಾಸವಾಗಿ ವಿವಾದದ ಬಳಿಕ ನಾಪತ್ತೆಯಾಗಿದ್ದ ಡ್ರೋನ್​ ಪ್ರತಾಪ್ ಇದೀಗ ಮತ್ತೆ ಕಾಣಿಸಿಕೊಂಡಿದ್ದಾರೆ.

ಬೆಂಗಳೂರು: ನಾನೊಬ್ಬ ಯುವ ವಿಜ್ಞಾನಿ, ನಾನು ಡ್ರೋನ್​ ತಯಾರಿಸಿದ್ದೇನೆ ಎಂದು ಹೇಳಿಕೊಂಡು ವ್ಯಾಪಕ ಸುದ್ದಿಗೆ ಗ್ರಾಸವಾಗಿ ವಿವಾದದ ಬಳಿಕ ನಾಪತ್ತೆಯಾಗಿದ್ದ ಡ್ರೋನ್​ ಪ್ರತಾಪ್ ಇದೀಗ ಮತ್ತೆ ಕಾಣಿಸಿಕೊಂಡಿದ್ದಾರೆ.

ಹೌದು.. ಪೊಲೀಸರ ವಿಚಾರಣೆಯನ್ನೂ ಎದುರಿಸಿ ಕಣ್ಮರೆಯಾಗಿದ್ದ ಡ್ರೋನ್​ ಪ್ರತಾಪ್​, ಎರಡು ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರತ್ಯಕ್ಷರಾಗಿರುವ ಪ್ರತಾಪ್​, ಈ ಬಾರಿ ಹೊಸದಾಗಿ ಏನೋ ಪ್ರಾರಂಭಿಸುತ್ತಿರುವಂತೆ ಮುನ್ಸೂಚನೆ ನೀಡಿದ್ದಾರೆ. ಟೇಬಲ್​ ಮೇಲೊಂದು ಲ್ಯಾಪ್​ಲಾಪ್​ ಇಟ್ಟು, ಅದಕ್ಕೆ ಡಾಟಾ ಕೇಬಲ್​ ಅವಳವಡಿಸಿರುವ ಯಾವುದೋ ಒಂದು ಸಾಧನವನ್ನು ತಮ್ಮ ಮುಂದಿಟ್ಟುಕೊಂಡು, ಎರಡು ಕೈಗಳಿಗೆ ಹಳದಿ ಬಣ್ಣದ ರಕ್ಷಾ ಕವಚ ಹಾಗೂ ಕಣ್ಣಿಗೆ ಸುರಕ್ಷಿತ ಕನ್ನಡಕ ಧರಿಸಿ, ಒಂದು ಕೈಯಲ್ಲಿ ಸಾಲ್ಡರಿಂಗ್ ಗೇರ್​ ಹಿಡಿದು ನಗುತ್ತಾ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. 

ಟೇಬಲ್​ ಮೇಲೆ ಇನ್ನಿತರ ಎಲೆಕ್ಟ್ರಾನಿಕ್​ ಉಪಕರಣಗಳಿದ್ದು, ಟೇಬಲ್​ನ ಒಂದು ಬದಿಯಲ್ಲಿ ಡ್ರೋನ್​ ಕ್ಯಾಮೆರಾದ ಅರ್ಧ ಚಿತ್ರ ಕಾಣುತ್ತದೆ. ಈ ಬಾರಿ ಡ್ರೋನ್​ ಪ್ರತಾಪ್​ ಯಾವ ಪ್ರಯತ್ನ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ತಿಳಿಸಿಲ್ಲ. ಆದರೆ, 'ಕೆಟ್ಟ ಜನರು ನಿಮ್ಮ ಜೀವನವನ್ನು ತೊರೆದಾಗ, ಸರಿಯಾದ ವಿಷಯಗಳು ನಿಮ್ಮ ಜೀವನದಲ್ಲಿ ನಡೆಯಲು ಪ್ರಾರಂಭಿಸುತ್ತವೆ' ಎಂಬ ಅಡಿಬರಹ ನೀಡಿದ್ದಾರೆ. 

ಸದ್ಯ ಪ್ರತಾಪ್​ ಅವರ ಹೊಸ ಅವತಾರ ವೈರಲ್​ ಆಗಿದ್ದು, ಫೋಟೋ ನೋಡಿದ ನೆಟ್ಟಿಗರು ಪ್ರತಾಪ್​ ಅವರ ಇನ್​ಸ್ಟಾಗ್ರಾಂ ಖಾತೆಯಲ್ಲಿ ಬಗೆಬಗೆಯ ಕಾಮೆಂಟ್​ ಮೂಲಕ ಕಾಲೆಳೆಯುತ್ತಿದ್ದಾರೆ. ಈ ಬಾರಿ ಯಾವ ರಾಕೆಟ್​ ಹಾರಿಸ್ತೀರಾ ಅಣ್ಣಾ ಎಂದು ನೆಟ್ಟಿಗರೊಬ್ಬರು ಕೇಳಿದರೆ, ಇನ್ನೊಬ್ಬ ಅಣ್ಣಾ ಮಿಕ್ಸಿ ರಿಪೇರಿ ಮಾಡುತ್ತಿದ್ದೀರಾ ಎಂದಿದ್ದಾರೆ. ಕಾಗೆ ಪ್ರತಾಪ ಎಂದು ಮಗದೊಬ್ಬ ನೆಟ್ಟಿಗ ವ್ಯಂಗ್ಯವಾಡಿದ್ದಾರೆ. ಅಣ್ಣಾ ನನ್ನ ಇಯರ್​ ಫೋನ್​ನಲ್ಲಿ ಒಂದು ಬದಿ ಕೇಳುತ್ತಿಲ್ಲ, ರಿಪೇರಿ ಮಾಡಿ ಕೊಡು, ಸಾಲ್ಡರಿಂಗ್​ ಮಾಡೋಕೆ ಈ ರೀತಿಯ ಬಿಲ್ಡಪ್​ ಬೇಕಾ?, ಅಣ್ಣನ ಮರು ವಿಶ್ವರೂಪ, ಬ್ರೊ ತುರ್ತಾಗಿ ಶಿವಮೊಗ್ಗದಿಂದ ವಿಜಯಪುರಕ್ಕೆ ಒಂದು ಬ್ಲಡ್​ ಬಾಟಲ್​ ಕಳುಹಿಸಬೇಕಿತ್ತು. 10 ನಿಮಷದಲ್ಲಿ ಕಳುಹಿಸಬೇಕು. ನಿಮ್ಮ ಡ್ರೋಣ್​ ಕಳುಹಿಸಿ, ನಮಗೆ ಸಹಾಯವಾಗುತ್ತೆ ಎಂಬಿತ್ಯಾದಿ ಬಗೆಬಗೆಯ ಕಾಮೆಂಟ್​ಗಳ ಮೂಲಕ ಡ್ರೋನ್​… ಅಲ್ಲ ಅಲ್ಲ ಕಾಗೆ ಪ್ರತಾಪ್​ನನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ, ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!