ರಾಜ್ಯ

ಕೇವಲ 3,673 ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸರ್ಕಾರ ನಿರ್ಧಾರ!

Manjula VN

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 3,500 ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಇತರೆ ಪೌರಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ತಮ್ಮ ನೋವನ್ನು ತೋಡಿಕೊಂಡಿರುವ ಪೌರಕಾರ್ಮಿಕರು, ನಾವೂ ರಾಜ್ಯದ ನಿವಾಸಿಗಳು. ಇಡೀ ನಗರವನ್ನು ಸ್ವಚ್ಛವಾಗಿಡುತ್ತೇವೆ. ನಗರದಲ್ಲಿ ಕೆಲಸ ಮಾಡುತ್ತಿರುವ 18,000 ಪೌರಕಾರ್ಮಿಕರಲ್ಲಿ ಕೇವಲ 3,000 ಮಂದಿಗೆ ಖಾಯಂ ಉದ್ಯೋಗ ನೀಡುತ್ತಿರುವುದು ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂ ನೌಕರರನ್ನಾಗಿ ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ, ಸರಕಾರ ಸೆ.26ರಂದು ಪ್ರಸ್ತಾಪಿಸಿದ ಕರಡಿನಲ್ಲಿ ಕೇವಲ 3,673 ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗುವುದು ಎಂದು ಹೇಳಿದೆ. ಇದಕ್ಕೆ ಇತರೆ ಪೌರಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಎಐಸಿಸಿಟಿಯು ರಾಜ್ಯ ಸಮಿತಿ ಸದಸ್ಯೆ ಮೈತ್ರೇಯಿ ಕೃಷ್ಣನ್ ಮಾತನಾಡಿ, ಲೋಡರ್‌ಗಳು, ಕಸದ ಟ್ರಕ್ ಚಾಲಕರು ಮತ್ತು ಒಳಚರಂಡಿ ಸ್ವಚ್ಛಗೊಳಿಸುವ ಕಾರ್ಮಿಕರು ಸೇರಿದಂತೆ ಪೌರ ಕಾರ್ಮಿಕರು ತಮ್ಮ ಉದ್ಯೋಗಗಳನ್ನು ಕಾಯಂಗೊಳಿಸುವಂತೆ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. "ಪ್ರತಿಭಟನೆಗಳ ನಂತರ, ಗುತ್ತಿಗೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ತೆಗೆದುಹಾಕಲಾಗುವುದು ಮತ್ತು ಎಲ್ಲಾ ಕಾರ್ಮಿಕರನ್ನು ಕಾಯಂಗೊಳಿಸಲಾಗುವುದು ಎಂದು ಸರ್ಕಾರವು ಜುಲೈನಲ್ಲಿ ಒಪ್ಪಿಕೊಂಡಿತ್ತು. ಹೀಗಾಗಿ ಇದೀಗ ನ.6ರಂದು ಸಮಾವೇಶ ನಡೆಸಿ ಭರವಸೆ ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಲಾಗಿದೆ. ಕಾರ್ಮಿಕ ಸಂಘಗಳು ಮತ್ತು ಪೌರಕಾರ್ಮಿಕರು ಸಮಾನ ವೇತನ, ಹೆರಿಗೆ ಸೌಲಭ್ಯಗಳು, ವಾರದ ರಜೆ ಮತ್ತು ರಜೆಗಳು ಮತ್ತು ಇತರ ಗ್ರಾಚ್ಯುಟಿಯ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತೇವೆಂದು ಹೇಳಿದ್ದಾರೆ.

SCROLL FOR NEXT