ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಲಬುರಗಿ: ಬಾಲಕಿಯನ್ನು ರೇಪ್ ಮಾಡಿ ಕೊಲೆ; 24 ಗಂಟೆಯಲ್ಲೇ ಆರೋಪಿ ಅಪ್ರಾಪ್ತ ಬಾಲಕನ ಬಂಧನ!

ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ಆರೋಪಿ ಅಪ್ರಾಪ್ತ ಬಾಲಕನನ್ನು ಕಳೆದ 24 ಗಂಟೆಗಳಲ್ಲೇ ಪೊಲೀಸರು ಬಂಧಿಸಿದ್ದಾರೆ.

ಬಂಧನ
Vishwanath S
Updated On : 3 Nov 2022, 12:34 am

ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ಆರೋಪಿ ಅಪ್ರಾಪ್ತ ಬಾಲಕನನ್ನು ಕಳೆದ 24 ಗಂಟೆಗಳಲ್ಲೇ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿತ್ತು. ಕಳೆದ 24 ಗಂಟೆಯಲ್ಲೇ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು ಬಾಲಕಿ ವಾಸವಿದ್ದ ಗ್ರಾಮದ 16 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 

ಕಲಬುರಗಿ ಎಸ್ ಪಿ ಇಶಾ ಪಂತ್ ಅವರು ಪ್ರಕರಣ ಭೇದಿಸಿದ ಸಿಬ್ಬಂದಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆ ನಡೆಸಲಾಗುತ್ತಿದ್ದು ಶೀಘ್ರದಲ್ಲೇ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

Advertisement

Advertisement

ಇದನ್ನೂ ಓದಿ: ಕಲಬುರಗಿಯಲ್ಲಿ ಅಮಾನುಷ ಕೃತ್ಯ: ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ಅಫಜಲಪುರ ತಾಲೂಕಿನ 15 ವರ್ಷದ ಬಾಲಕಿ ಕೊರಳ್ಳ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಸಾಯಂಕಾಲ ವೇಳೆ ಬಹಿರ್ದೆಸೆಗೆಂದು ಗದ್ದೆಯ ಕಡೆಗೆ ಹೋಗಿದ್ದ ವೇಳೆ ದುಷ್ಕರ್ಮಿ ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದು. ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಆಕೆಯ ಶವ ಪತ್ತೆಯಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement