ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 61 ಸೇರಿ ರಾಜ್ಯದಲ್ಲಿ 96 ಮಂದಿಗೆ ಪಾಸಿಟಿವ್; ಸಾವು ಶೂನ್ಯ!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 96 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,69,409ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 96 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,69,409ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,257 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 61 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,74,945ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 169 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,27,267ಕ್ಕೆ ಏರಿಕೆಯಾಗಿದೆ. ಇನ್ನು 1,843 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ ಸಜ್ಜಾದ CJP; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್ ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

ಬೀದಿ ನಾಯಿಯ ಭೀಕರ ದಾಳಿ: ಮನೆಯಿಂದ ಹೊರಗೆ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಗಂಭೀರ! Video