ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ 
ರಾಜ್ಯ

ಸಾರ್ವಜನಿಕ ವಾಹನಗಳಲ್ಲಿ ಪತ್ತೆಹಚ್ಚುವಿಕೆ ಸಾಧನಗಳ ಅಳವಡಿಕೆಗೆ ಸಚಿವ ಸಂಪುಟ ಒಪ್ಪಿಗೆ

ಬಸ್ಸು, ಟ್ಯಾಕ್ಸಿ ಮತ್ತು ಆಟೋ ಸೇರಿದಂತೆ ಎಲ್ಲಾ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ವಾಹನ ಇರುವ ಸ್ಥಳ ಪತ್ತೆ ಸಾಧನಗಳು ಮತ್ತು ತುರ್ತು ಪ್ಯಾನಿಕ್ ಬಟನ್‌ಗಳನ್ನು (vehicle location tracking devices and emergency panic buttons) ಅಳವಡಿಸಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬೆಂಗಳೂರು: ಬಸ್ಸು, ಟ್ಯಾಕ್ಸಿ ಮತ್ತು ಆಟೋ ಸೇರಿದಂತೆ ಎಲ್ಲಾ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ವಾಹನ ಇರುವ ಸ್ಥಳ ಪತ್ತೆ ಸಾಧನಗಳು ಮತ್ತು ತುರ್ತು ಪ್ಯಾನಿಕ್ ಬಟನ್‌ಗಳನ್ನು (vehicle location tracking devices and emergency panic buttons) ಅಳವಡಿಸಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರದ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು. ಯೋಜನೆಗೆ 20.36 ಕೋಟಿ ರೂಪಾಯಿ ಮಂಜೂರಾಗಿದ್ದು, ಶೇಕಡಾ 60ರಷ್ಟು ಕೇಂದ್ರ ಸರ್ಕಾರ ಹಾಗೂ ಉಳಿದ ಹಣವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದರು.

ಈ ಕ್ರಮವು ಪ್ರಾಥಮಿಕವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ಗುರಿಯನ್ನು ಹೊಂದಿದೆ. ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗವನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ, ಜೊತೆಗೆ ಪಾರ್ಕಿಂಗ್ ಮೇಲೆ ಗಮನ ಇರಿಸುತ್ತದೆ. ಕೇಂದ್ರೀಯ ಯಾಂತ್ರೀಕೃತ ವ್ಯವಸ್ಥೆಯ ಮೂಲಕ, ಅಧಿಕಾರಿಗಳು ವಾಹನಗಳು ಸರಿಯಾದ ಮಾರ್ಗದಲ್ಲಿ ಚಲಿಸುತ್ತಿವೆಯೇ ಎಂಬುದನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ. ಅನಧಿಕೃತ ವಾಹನಗಳ ಮೇಲೆ ನಿಗಾ ಇಡಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು. 

4.51 ಲಕ್ಷ ಕ್ಯಾಬ್‌ಗಳು ಮತ್ತು ಟ್ಯಾಕ್ಸಿಗಳು, 16,432 ಶಾಲಾ ಬಸ್‌ಗಳು, 23,077 ಖಾಸಗಿ ಸಾರಿಗೆ ವಾಹನಗಳು, 24,701 ಕೆಎಸ್‌ಆರ್‌ಟಿಸಿ ಬಸ್‌ಗಳು, 5,138 ಗುತ್ತಿಗೆ ವಾಹನಗಳು, 1,900 ಪ್ರವಾಸಿ ಬಸ್‌ಗಳು ಮತ್ತು 85,949 ಸರಕು ವಾಹನಗಳು ಸೇರಿದಂತೆ 6.08 ಲಕ್ಷಕ್ಕೂ ಹೆಚ್ಚು ವಾಹನಗಳಲ್ಲಿ ಈ ಸಾಧನಗಳನ್ನು ಅಳವಡಿಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!

ತಾಂತ್ರಿಕ ಕಾರಣಗಳಿಂದ SIR ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸಾಧ್ಯವಿಲ್ಲ: ಅಮಿತ್ ಶಾ

25 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು: 'ಪೂಕಿ ಬಾಬಾ' ಅನಿರುದ್ಧಾಚಾರ್ಯ ವಿರುದ್ಧ ಕೇಸ್ ದಾಖಲು! ಏನು ಹೇಳಿದ್ರು ಗೊತ್ತಾ?

Amazon: ಭಾರತದಲ್ಲಿ 3 ಲಕ್ಷ ಕೋಟಿ ರೂ ಹೆಚ್ಚುವರಿ ಹೂಡಿಕೆ; 10 ಲಕ್ಷ ಉದ್ಯೋಗ ಸೃಷ್ಟಿ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

SCROLL FOR NEXT