ಸಾಂದರ್ಭಿಕ ಚಿತ್ರ 
ರಾಜ್ಯ

ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ: ರಾಜ್ಯ ಸರ್ಕಾರ ಆದೇಶ

ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದ್ದ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದ್ದ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸಿವಿಲ್‌, ಸಿಎಆರ್, ಡಿಎಆರ್, ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಸಾಲಿನ ಕಾನ್ಸ್‌ಟೇಬಲ್‌ ನೇಮಕಾತಿಗೆ ಮಾತ್ರ ಇದು ಅನ್ವಯವಾಗಲಿದೆ. ರಾಜ್ಯ ಪೊಲೀಸ್ ಕಾನ್ಸ್ ಸ್ಟೇಬಲ್ ಗರಿಷ್ಟ ನೇಮಕ ವಯೋಮಿತಿ ಈ ಹಿಂದೆ ಒಂದು ಬಾರಿ ಹೆಚ್ಚಳ ಮಾಡಿದ್ದು, ಈಗ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿದೆ.

ಈ ಸಂಬಂಧ ಜಿಲ್ಲಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ  3484 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸೇವಾ ನಿರತ ಅಭ್ಯರ್ಥಿಗಳ ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ವಯಸ್ಸಿಗೆ 35 ಹಾಗೂ ಇತರೆ ಅಭ್ಯರ್ಥಿಗಳಿಗೆ 33 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸಶಸ್ತ್ರ ಪಡೆಯ ಪೊಲೀಶ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 31 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 33 ವರ್ಷ ನಿಗದಿ ಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ