ಆರಗ ಜ್ಞಾನೇಂದ್ರ 
ರಾಜ್ಯ

ರೇಣುಕಾಚಾರ್ಯ ಸಹೋದರನ ಪುತ್ರ ನಿಗೂಢ ಸಾವು ಪ್ರಕರಣ: ಎಲ್ಲಾ ಆಯಾಮಗಳಿಂದ ತನಿಖೆ- ಆರಗ ಜ್ಞಾನೇಂದ್ರ

ರೇಣುಕಾಚಾರ್ಯರ ಸಹೋದರನ ಪುತ್ರನ ನಿಗೂಢ ಸಾವು ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ರೇಣುಕಾಚಾರ್ಯರ ಸಹೋದರನ ಪುತ್ರನ ನಿಗೂಢ ಸಾವು ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೇಣುಕಾಚಾರ್ಯರ ಸಹೋದರನ ಮಗನ ಕಾರು ಕಾಲುವೆಯಲ್ಲಿ ಸಿಕ್ಕಿದೆ. ಕಾರಿನಲ್ಲಿ ಶವ ಪತ್ತೆಯಾಗಿದೆ. ಉಳಿದದ್ದು ತನಿಖೆಯಿಂದ ಹೊರಬರಬೇಕಿದೆ. ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ರೇಣುಕಾಚಾರ್ಯ ನನಗೂ ದಿನದಲ್ಲಿ 2-3 ಬಾರಿ ಕರೆ ಮಾಡುತ್ತಿದ್ದರು. ನಾನು ಅವರಿಗೆ ಕರೆ ಮಾಡಿ ಮಾತನಾಡುತ್ತಿದ್ದೆ. ಪ್ರಕರಣ ಸಂಬಂಧ ರೇಣುಕಾಚಾರ್ಯ ಅವರು ಶಂಕೆಗಳನ್ನು ವ್ಯಕ್ತಪಡಿಸಿದ್ದಾರೆ. ಎಲ್ಲಾ ಆಯಾಮದಲ್ಲೂ ಚರ್ಚೆ ನಡೆಸಲಾಗುತ್ತದೆ. ಶೀಘ್ರದಲ್ಲಿಯೇ ಹೊನ್ನಾಳಿಗೆ ಭೇಟಿ ನೀಡಿ ರೇಣುಕಾಚಾರ್ಯ ಅವರನ್ನು ಭೇಟಿ ಮಾಡುತ್ತೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಮಂಡ್ಯ ಘಟನೆ ಕುರಿತು ಮಾತನಾಡಿ, ಮಂಡ್ಯದಲ್ಲಿ ಆಸ್ಪತ್ರೆಗೆ ಹೊರಟವರನ್ನು ಅಡ್ಡ ಹಾಕಿ ಹೆಲ್ಮೆಟ್ ಹಾಕದಕ್ಕೆ ಪೇದೆ ದಂಡ ಹಾಕಿದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್