ಹಂಪಿಯಲ್ಲಿ ಮಣ್ಣು ಸಂಗ್ರಹಿಸಿದ ಸಚಿವರಾದ ಆರ್. ಅಶೋಕ, ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮತ್ತಿತರರು 
ರಾಜ್ಯ

ಕೆಂಪೇಗೌಡ ಪ್ರತಿಮೆ ಅನಾವರಣ: ಹಂಪಿಯ ದೇವಸ್ಥಾನದಲ್ಲಿ ಮಣ್ಣು ಸಂಗ್ರಹ

ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಯೋಜನೆ ಸಾಕಾರವಾಗಲು ವಿಜಯ ನಗರ ಸಾಮ್ರಾಜ್ಯದ ಕೊಡುಗೆ ಅಪಾರವಾಗಿದೆ. ಪ್ರಗತಿ ಪ್ರತಿಮೆಅನಾವರಣದ ಪ್ರಯುಕ್ತ ಈ ನೆಲದ ಪವಿತ್ರ ಮೃತ್ತಿಕೆ ಸಂಗ್ರಹಿಸುವ ಸೌಭಾಗ್ಯ ನಮಗೆ ದೊರೆಯಿತು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದರು.

ಹಂಪಿ: ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಶುಕ್ರವಾರ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ರೂ ಆದ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್ ಅಶೋಕ ಸೇರಿದಂತೆ ನಾಲ್ವರು ಸಚಿವರು ಹಂಪಿಗೆ ಬಂದು ಇಲ್ಲಿನ ಪವಿತ್ರ ಮಣ್ಣು ಕೊಂಡೊಯ್ದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಯುವಜನ ಕ್ರೀಡಾ ಸಚಿವ ನಾರಾಯಣಗೌಡ, ಸಂಸದ ವೈ.ದೇವೇಂದ್ರಪ್ಪ ಉಪಸ್ಥಿತರಿದ್ದರು. 

ಹಂಪಿ ವಿರೂಪಾಕ್ಷೇಶ್ವರ, ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದ ಸಚಿವರು, ಬಳಿಕ ಮಣ್ಣು ಸಂಗ್ರಹಿಸಿದರು. ನಾಡಪ್ರಭು ಕೆಂಪೇಗೌಡ, ಶ್ರೀ ಕೃಷ್ಣದೇವರಾಯನ ಹೆಸರಲ್ಲಿ ಅರ್ಚನೆ ಮಾಡಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಯೋಜನೆ ಸಾಕಾರವಾಗಲು ವಿಜಯ ನಗರ ಸಾಮ್ರಾಜ್ಯದ ಕೊಡುಗೆ ಅಪಾರವಾಗಿದೆ. ಪ್ರಗತಿ ಪ್ರತಿಮೆಅನಾವರಣದ ಪ್ರಯುಕ್ತ ಈ ನೆಲದ ಪವಿತ್ರ ಮೃತ್ತಿಕೆ ಸಂಗ್ರಹಿಸುವ ಸೌಭಾಗ್ಯ ನಮಗೆ ದೊರೆಯಿತು ಎಂದು ತಿಳಿಸಿದರು. 

ಇದಕ್ಕೂ ಮುನ್ನ ಸಚಿವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಬಿಜೆಪಿ ಮುಖಂಡರು ಸ್ವಾಗತಿಸಿದರು. ಅಲ್ಲಿಂದ ಹಂಪಿ ವರೆಗೆ ಬೈಕ್ ಜಾಥಾ ನಡೆಸಿದರು. ಅಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಸಚಿವರು ವಿರೂಪಾಕ್ಷ ದೇಗುಲದ ವರೆಗೆ‌ ಹೆಜ್ಜೆ ಹಾಕಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!