ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆಯುತ್ತಿರುವುದು. 
ರಾಜ್ಯ

ಕೋಲಾರ: ಕೆಂಪೇಗೌಡರ ರಥಯಾತ್ರೆ ಸ್ವಾಗತ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ..!

ಕೆಂಪೇಗೌಡರ ರಥಯಾತ್ರೆ ಸ್ವಾಗತ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್​ನಲ್ಲಿ ನಡೆದಿದೆ.

ಕೋಲಾರ: ಕೆಂಪೇಗೌಡರ ರಥಯಾತ್ರೆ ಸ್ವಾಗತ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್​ನಲ್ಲಿ ನಡೆದಿದೆ.

ಮಾಜಿ ಶಾಸಕ ಮಂಜುನಾಥ್ ಗೌಡ, ಹೂಡಿ ವಿಜಯ್ ಕುಮಾರ್ ಬಣಗಳ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಮುಖಂಡ ಹೂಡಿ ವಿಜಯ್‌ಕುಮಾರ್‌ ನೇತೃತ್ವದ ಒಂದು ಗುಂಪು ಹಾಗೂ ಮಾಜಿ ಶಾಸಕ ಕೋಡಿಹಳ್ಳಿ ಮಂಜುನಾಥ್‌ ಗೌಡ ನೇತೃತ್ವದಲ್ಲಿ ಮತ್ತೊಂದು ಗುಂಪು ಮಾಲೂರು ತಾಲೂಕಿಗೆ ಯಾತ್ರೆಯನ್ನು ಬರಮಾಡಿಕೊಳ್ಳಲು ಕಾದು ಕುಳಿತಿತ್ತು.

ಎರಡೂ ಗುಂಪುಗಳು ಏಕಕಾಲದಲ್ಲಿ ಯಾತ್ರೆಯನ್ನು ಸ್ವೀಕರಿಸಲು ಯತ್ನಿಸಿದ ಪರಿಣಾಮ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಸಮ್ಮುಖದಲ್ಲಿ ಗದ್ದಲ ಉಂಟಾಯಿತು.

ಈ ವೇಳೆ ಮಂಜುನಾಥ ಗೌಡರು ರಥಯಾತ್ರೆ ವಾಹನವನ್ನು ಏರಿ ಚಾಲಕನನ್ನು ಕೆಳಗೆ ತಳ್ಳಿದ್ದಾರೆ. ಬಳಿಕ ವಿಜಯ್ ಕುಮಾರ್ ಬಣದ ಗುಂಪು ವಾಹನ ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಗದ್ದಲ ಉಂಟಾಗಿದ್ದು, ಮಧ್ಯೆ ಪ್ರವೇಶಿಸಿದ ಪೊಲೀಸರು ಲಾಠಿಚಾರ್ಚ್ ಮಾಡಿ ಸ್ಥಳದಲ್ಲಿದ್ದ ಗದ್ದಲದ ವಾತಾವರಣ ತಿಳಿಗೊಳ್ಳುವಂತೆ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT