ಕರ್ನಾಟಕ ಹೈಕೋರ್ಟ್ 
ರಾಜ್ಯ

ವೇಶ್ಯಾಗೃಹದಲ್ಲಿರುವ ಅಪ್ರಾಪ್ತೆ ಬಲವಂತದ ಲೈಂಗಿಕ ಸಂಪರ್ಕದ ದೂರು ನೀಡಿದರೆ ಗ್ರಾಹಕನನ್ನು ಬಿಡುವಂತಿಲ್ಲ: ಹೈಕೋರ್ಟ್

ವೇಶ್ಯಾಗೃಹದಲ್ಲಿರುವ ಅಪ್ರಾಪ್ತ ಬಾಲಕಿ ವ್ಯಕ್ತಿಯೊಬ್ಬ ಬಲವಂತದ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ದೂರು ನೀಡಿದರೆ, ಆತನನ್ನು ಗ್ರಾಹಕ ಎಂದು ಪರಿಗಣಿಸಿ ಬಿಡಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಬೆಂಗಳೂರು: ವೇಶ್ಯಾಗೃಹದಲ್ಲಿರುವ ಅಪ್ರಾಪ್ತ ಬಾಲಕಿ ವ್ಯಕ್ತಿ ಯೊಬ್ಬ ಬಲವಂತದ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ದೂರು ನೀಡಿದರೆ, ಆತನನ್ನು ಗ್ರಾಹಕ ಎಂದು ಪರಿಗಣಿಸಿ ಬಿಡಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ವೇಶ್ಯಾಗೃಹದಲ್ಲಿ ಸಿಲುಕಿಕೊಂಡಿರುವ ಅಪ್ರಾಪ್ತೆ ತನ್ನೊಂದಿಗೆ ಒತ್ತಾಯಪೂರ್ವವಾಗಿ ಲೈಂಗಿಕ ಕ್ರಿಯೆ ನಡೆಸಿದ್ದ ಎಂಬುದಾಗಿ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಿಸಿದಲ್ಲಿ ಆರೋಪಿಯನ್ನು ಗ್ರಾಹಕ ಎಂದು ಪರಿಗಣಿಸಿ ಕೇಸ್‍ನಿಂದ ಕೈಬಿಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದೆ.

ಮಂಗಳೂರಿನ ವೇಶ್ಯಾಗೃಹಕ್ಕೆ ಹೋಗಿದ್ದ ಕೇರಳ ಮೂಲದ ಮಹಮ್ಮದ್ ಶರೀಫ್(45) ಎನ್ನುವವರು ತಮ್ಮ ವಿರುದ್ಧ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮತ್ತು ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆ ಪ್ರಕ್ರಿಯೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ವೇಶ್ಯಾಗೃಹಗಳ ಮೇಲೆ ಪೊಲೀಸರು ದಾಳಿ ನಡೆಸುವ ಸಂದರ್ಭದಲ್ಲಿ ಸಿಕ್ಕಿ ಹಾಕಿಕೊಳ್ಳುವವರನ್ನು ಗ್ರಾಹಕರು ಎಂದು ಪರಿಗಣಿಸಬಹುದು. ಆದರೆ, ಅಪ್ರಾಪ್ತರಾದ ಸಂತ್ರಸ್ತರೇ ಆರೋಪಿ ವಿರುದ್ಧ ದೂರು ನೀಡಿದಲ್ಲಿ ಗ್ರಾಹಕ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಅಲ್ಲದೆ, ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಚಿಕ್ಕಮಗಳೂರು ಮೂಲದ 17 ವರ್ಷದ ಅಪ್ರಾಪ್ತೆ ಮಂಗಳೂರಿನ ತಮ್ಮ ಸಂಬಂಧಿಕರ ಮನೆಯಲ್ಲಿದ್ದು ವಿದ್ಯಾಭ್ಯಾಸದಲ್ಲಿ ತೊಡಗಿದ್ದರು. ಆಕೆಯ ಸಮಸ್ಯೆಗಳಿಗೆ ಪರಿಹಾರ ನೀಡುವ ರೀತಿಯಲ್ಲಿ ಪರಿಚಯಿಸಿಕೊಂಡು ಕೆಲವು ಆರೋಪಿಗಳು ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದರು. ನಂತರ ವೇಶ್ಯಾವಾಟಿಕೆ ಸ್ಥಳದಿಂದ ತಪ್ಪಿಸಿಕೊಂಡಿದ್ದ ಸಂತ್ರಸ್ತ ಬಾಲಕಿ ಪೋಷಕರಿಗೆ ಈ ಅಂಶವನ್ನು ತಿಳಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅರ್ಜಿದಾರರು ಸೇರಿದಂತೆ ಇತರ ಆರೋಪಿಗಳ ವಿರುದ್ಧ ಮಾನವ ಕಳ್ಳಸಾಗಾಣೆ(ನಿಯಂತ್ರಣ) ಕಾಯಿದೆ, ಅಪ್ರಾಪ್ತ ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿಯಲ್ಲಿ ಪ್ರಕರಣ ದಾಖಸಿಕೊಂಡು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲರು, ಪ್ರಕರಣದಲ್ಲಿ ಅರ್ಜಿದಾರರು ಗ್ರಾಹಕರಾಗಿದ್ದಾರೆ. ಆದರೆ, ಮಾನವ ಕಳ್ಳಸಾಗಾಣೆ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ, ತನಿಖಾಧಿಕಾರಿಗಳು ಒಂದೇ ಪ್ರಕರಣದಲ್ಲಿ ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದರೆ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ವಾದ ಮಂಡಿಸಿದ್ದರು. ಆದರೆ, ಹೈಕೋರ್ಟ್ ವಾದವನ್ನು ತಳ್ಳಿಹಾಕಿದ್ದು, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT