ಚಂದ್ರಶೇಖರ್ ಅವರ ಅಂತ್ಯಕ್ರಿಯೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. 
ರಾಜ್ಯ

ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರು ಅಂತ್ಯಕ್ರಿಯೆ: ಯಡಿಯೂರಪ್ಪ ಸಂತಾಪ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ವೀರಶೈವ ಲಿಂಗಾಯತ ಜಂಗಮ ಸಂಪ್ರದಾಯದಂತೆ ಕುಂದೂರು ಗ್ರಾಮದಲ್ಲಿರುವ ಕುಟುಂಬದ ಜಮೀನಿನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ದಾವಣಗೆರೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ವೀರಶೈವ ಲಿಂಗಾಯತ ಜಂಗಮ ಸಂಪ್ರದಾಯದಂತೆ ಕುಂದೂರು ಗ್ರಾಮದಲ್ಲಿರುವ ಕುಟುಂಬದ ಜಮೀನಿನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತಿತರರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಅಕ್ಟೋಬರ್ 30 ರಿಂದ ನಾಪತ್ತೆಯಾಗಿದ್ದ ಚಂದ್ರಶೇಖರ್ ಅವರ ಮೃತದೇಹ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ನೀರಿನ ಅಡಿಯಲ್ಲಿ ಬಿದ್ದಿದ್ದ ಕಾರಿನ ಹಿಂಬದಿಯ ಸೀಟಿನಲ್ಲಿ ನಿಗೂಢವಾಗಿ ಪತ್ತೆಯಾಗಿತ್ತು. ಆದರೆ, ವಾಹನ ಚಾಲಕ ಮಾತ್ರ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಚಂದ್ರಶೇಖರ್ ಅವರ ತಂದೆ ಎಂ.ಪಿ.ರಮೇಶ್ ನೀಡಿದ ದೂರಿನ ಮೇರೆಗೆ ದಾವಣಗೆರೆ ಪೊಲೀಸರು ಐಪಿಸಿ ಸೆಕ್ಷನ್ 302, 201, 427 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಂದ್ರಶೇಖರ್ ಅವರ ತಲೆಗೆ ತೀವ್ರವಾಗಿ ಹೊಡೆದು ಕೊಲೆ ಮಾಡಲಾಗಿದೆ. ಹತ್ಯೆ ಬಳಿಕ ಶವವನ್ನು ಕಾರಿನ ಹಿಂಬದಿಯಲ್ಲಿಟ್ಟು ನೀರಿಗೆ ತಳ್ಳಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ಹಂತಕರ ಪತ್ತೆಗೆ ಹೊನ್ನಾಳಿ ಮಾಜಿ ಇನ್ಸ್‌ಪೆಕ್ಟರ್ ಟಿ.ವಿ.ದೇವರಾಜ್ ನೇತೃತ್ವದಲ್ಲಿ ತಂಡ ರಚಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ರೇಣುಕಾಚಾರ್ಯ ಅವರಿಗೆ ಬಂದಿರುವ ಬೆದರಿಕೆ ಕರೆಗಳನ್ನು ಪತ್ತೆ ಮಾಡಲಾಗುತ್ತಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗುತ್ತದೆ ಎಂದಿದ್ದಾರೆ.

ರೇಣುಕಾಚಾರ್ಯ ಅವರಿಗೆ ಸಾಂತ್ವನ ಹೇಳಲು ಹೊನ್ನಾಳಿಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತಮಾಡಿ, ರೇಣುಕಾಚಾರ್ಯ ಅವರು ತಮ್ಮ ಸೋದರನ ಪುತ್ರನನ್ನು ಅಪಹರಿಸಲಾಗಿದೆ ಎಂದು ಹೇಳುತ್ತಿದ್ದು, ಅಷ್ಟರಲ್ಲಾಗಲೇ ಮೃತದೇಹ ಪತ್ತೆಯಾಗಿದೆ. ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜ್ಞಾನೇಂದ್ರ ಅವರೊಂದಿಗೆ ಮಾತನಾಡಿ, ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT