ಬಿಸಿ ನಾಗೇಶ್ 
ರಾಜ್ಯ

ಧ್ಯಾನದಿಂದ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುವುದೇ ಹಾಸ್ಯಾಸ್ಪದ; ಸಿದ್ದು ಟ್ವೀಟ್​​ಗೆ ಸಚಿವ ನಾಗೇಶ್ ತಿರುಗೇಟು

ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಧ್ಯಾನವನ್ನೂ "ರಾಜಕೀಯ ಅಜೆಂಡಾ, ಗಿಮಿಕ್" ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ...

ಬೆಂಗಳೂರು: ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಧ್ಯಾನವನ್ನೂ "ರಾಜಕೀಯ ಅಜೆಂಡಾ, ಗಿಮಿಕ್" ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ. ಸಿದ್ದರಾಮಯ್ಯ ಅವರೇ, ಧ್ಯಾನದಿಂದ ಯಾವ ಕೆಡುಕು ಇದೆ ಎಂಬುದನ್ನು ವಿವರಿಸುವಿರಾ?‌ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಧ್ಯಾನವನ್ನೂ "ರಾಜಕೀಯ ಅಜೆಂಡಾ, ಗಿಮಿಕ್" ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ. ಈ ಮೊದಲು ಕಾಂಗ್ರೆಸ್ ನಾಯಕರು ಯೋಗಾಚರಣೆಗೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ  ಅವರೇ, ಧ್ಯಾನದಿಂದ ಯಾವ ಕೆಡುಕು ಇದೆ ಎಂಬುದನ್ನು ವಿವರಿಸುವಿರಾ?‌ ಎಂದು ಕೇಳಿದ್ದಾರೆ.

ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ? ಎಂದು ಕೇಳಿದ್ದಾರೆ.

ಶಿಕ್ಷಣ ಕ್ಷೇತ್ರದ ಸುಧಾರಣೆ, ಬದಲಾವಣೆ, ಏಳಿಗೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶದಲ್ಲೇ ಮೊದಲು‌ ನಮ್ಮ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಭೌತಿಕ ತರಗತಿಗಳನ್ನು ಆರಂಭಿಸಿತು.

ಕೋವಿಡ್-19 ಕಾರಣ ಎರಡು ವರ್ಷಗಳ ಕಾಲ ಭೌತಿಕ ತರಗತಿಗಳಿಲ್ಲದೆ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು 'ಕಲಿಕಾ ಚೇತರಿಕೆ' ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ದಾಖಲೆಯ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.

21ನೇ ಶತಮಾನದ ಅಗತ್ಯಗಳಿಗೆ ಪೂರಕವಾಗಿರುವ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಅನುಷ್ಠಾನಗೊಳಿಸಲಾಗುತ್ತಿದೆ. ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ನೀಗಿಸಲು 8,100 ಕೊಠಡಿ ನಿರ್ಮಿಸಲಾಗುತ್ತಿದೆ. ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ನೀಡಲಾಗುತ್ತಿದೆ.

ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲೇ 30 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು/ಉಪನ್ಯಾಸಕರ ಸೇವೆ ಪಡೆಯಲಾಗಿದೆ. ದೈಹಿಕ ಶಿಕ್ಷಕರು ಸೇರಿದಂತೆ 2,500 ಪ್ರೌಢಶಾಲಾ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕ ಪ್ರಕ್ರಿಯೆಯನ್ನು ಮುಂಬರುವ ದಿನಗಳಲ್ಲಿ ಆರಂಭಿಸಲಾಗುತ್ತಿದೆ.

ಅರ್ಜಿ ಹಾಕದವರು, ಪರೀಕ್ಷೆ ಬರೆಯದವರನ್ನು ಶಿಕ್ಷಕರಾಗಿ ನೇಮಿಸಿ ಶೈಕ್ಷಣಿಕ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ಅಪ 'ಕೀರ್ತಿ' ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲಬೇಕಲ್ಲವೇ! ಭ್ರಷ್ಟಾಚಾರ, ಸಾಲು, ಸಾಲು ಹಗರಣಗಳಲ್ಲಿ ಮಿಂದೆದ್ದಿರುವುದು ಯಾರೆಂದು ರಾಜ್ಯದ ಜನತೆಗೆ ತಿಳಿದಿದೆ.

ನಿಮ್ಮ ಅವಧಿಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಅಭಿವೃದ್ಧಿ ಕಾರ್ಯಗಳನ್ನು ನೀವು ಮಾಡಿದ್ದರೇ ಶಿಕ್ಷಕರು ಮತ್ತು ಮೂಲಸೌಕರ್ಯಗಳ ಕೊರತೆ ಈ ಪ್ರಮಾಣದಲ್ಲಿ ಇರುತ್ತಿತ್ತೇ? ನೀವು ಅಧಿಕಾರದಲ್ಲಿದ್ದಾಗ ಬಾರದ ಶೈಕ್ಷಣಿಕ ಅಭಿವೃದ್ಧಿಯ ಆಲೋಚನೆಗಳು ಈಗ ನಿಮಗೆ ಬರುತ್ತಿರುವುದು ಸಂತೋಷ.

ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ, ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು 'ಕುಗ್ಗಿ ಹೋಗುತ್ತಾರೆ' ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT