ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ದಾಳಿ; ಮೂವರು ಪಿಎಫ್‌ಐ ಮುಖಂಡರ ಬಂಧನ 

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಮೂವರನ್ನು ಬಂಧಿಸಿದೆ.

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಮೂವರನ್ನು ಬಂಧಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಕೆ ಮಹಮ್ಮದ್ ಇಕ್ಬಾಲ್ ಮತ್ತು ಈತನ ಸಹೋದರ ಕೆ ಇಸ್ಮಾಯಿಲ್ ಶಾಫಿ ಮತ್ತು ಸುಳ್ಯ ತಾಲೂಕಿನ ಕಸಬಾ ಗ್ರಾಮದ ಇಬ್ರಾಹಿಂ ಶಾ ಬಂಧಿತ ಆರೋಪಿಗಳು.

ದಕ್ಷಿಣ ಕನ್ನಡ, ಹುಬ್ಬಳ್ಳಿ ಮತ್ತು ಮೈಸೂರು ಜಿಲ್ಲೆಗಳ 5 ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿದೆ.

ಬೆಳ್ಳಾರೆ ನಿವಾಸಿ ಹಾಗೂ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ನೆಟ್ಟಾರು ಅವರನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರು ಜೂನ್ 26 ರಂದು ಹರಿತವಾದ ಆಯುಧಗಳಿಂದ ಹತ್ಯೆಗೈದಿದ್ದರು.

ಶೋಧದ ವೇಳೆ ಆರೋಪಿಗಳು ಮತ್ತು ಶಂಕಿತರ ಮನೆಗಳಿಂದ ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಇದುವರೆಗೆ 10 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ವಿರುದ್ಧ ಎನ್‌ಐಎ ಬಹುಮಾನ ಘೋಷಿಸಿದ್ದು, ಅವರನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ. ಪ್ರಕರಣದ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾಟಿ ಚಿಕನ್-ಇಡ್ಲಿ': ಇಂದಿನ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ರಹಸ್ಯವೇನು?

ಡಿಸಿಎಂ ನಿವಾಸಕ್ಕೆ ಬ್ರೇಕ್ ಫಾಸ್ಟ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ- ಡಿಕೆ ಸೋದರರಿಂದ ಸ್ವಾಗತ-Video

ರಾಜ್ಯದಲ್ಲಿ ಮುಗಿಯದ ಕುರ್ಚಿ ಕದನ: CM-DCM ಬ್ರೇಕ್ ಫಾಸ್ಟ್ ಮೀಟಿಂಗ್ ನಡುವಲ್ಲೇ 'ಕೈ' ಶಾಸಕ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯಗೆ ನೆಚ್ಚಿನ 'ನಾಟಿ ಕೋಳಿ ಸಾರು' ಬಡಿಸಲಿರುವ ಡಿ ಕೆ ಶಿವಕುಮಾರ್: ತೀವ್ರ ಕುತೂಹಲ ಕೆರಳಿಸಿದ ಇಂದಿನ 2ನೇ ಬ್ರೇಕ್ ಫಾಸ್ಟ್ ಮೀಟಿಂಗ್ !

'ಪುರುಷ ಸಲಿಂಗಿ'ಗಳಲ್ಲಿ ಹೆಚ್ಚಿನ ಏಡ್ಸ್ ರೋಗ: ಸಚಿವ ದಿನೇಶ್ ಗುಂಡೂರಾವ್ ಕಳವಳ!

SCROLL FOR NEXT