ರಾಜ್ಯ

ಪರೀಕ್ಷೆ ಮುಗಿದ 2 ಗಂಟೆಗಳಲ್ಲಿಯೇ ಫಲಿತಾಂಶ, ದಾವಣಗೆರೆ ವಿವಿಯಿಂದ ಹೊಸ ದಾಖಲೆ!

Nagaraja AB

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ವಿಭಾಗ ಆರನೇ ಸೆಮಿಸ್ಟರ್ ಪದವಿ ಮತ್ತು ನಾಲ್ಕನೇ ಸೆಮಿಸ್ಟರ್ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಎರಡು ಗಂಟೆಗಳಲ್ಲಿ ಪ್ರಕಟಿಸುವ ಮೂಲಕ ಹೊಸ ದಾಖಲೆ ಬರೆದಿದೆ. ಅಷ್ಟೇ ಅಲ್ಲ, ಮೌಲ್ಯಮಾಪನ ಮುಗಿದ 15 ನಿಮಿಷಗಳಲ್ಲಿಯೇ ಫಲಿತಾಂಶ ಪ್ರಕಟಿಸಲಾಗಿದೆ. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ. ಕೆ. ಶಿವಶಂಕರ್, “ಕಂಪ್ಯೂಟರ್ ಸೈನ್ಸ್, ಗಣಿತ, ಭೌತಶಾಸ್ತ್ರ, ಅರ್ಥಶಾಸ್ತ್ರ ಮತ್ತು ಸಸ್ಯಶಾಸ್ತ್ರದ ಮೌಲ್ಯಮಾಪನ ಕಾರ್ಯವನ್ನು (ಆಂತರಿಕ ಮತ್ತು ಬಾಹ್ಯ ಎರಡೂ) ಪರೀಕ್ಷೆ ಮುಗಿದ ಎರಡು ಗಂಟೆಗಳಲ್ಲಿ  ಫಲಿತಾಂಶ ಪ್ರಕಟಿಸಲಾಗಿದ್ದು, ಫೋನ್ ಮೂಲಕ ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಲಾಯಿತು. ಶೇ. 90 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಅವರು ತಿಳಿಸಿದರು. 

ದೋಷಮುಕ್ತ ರೀತಿಯಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಸಲಾಗಿದೆ. ಸುಮಾರು 41,000 ಸ್ನಾತಕ ಮತ್ತು 4,000 ಸ್ನಾತಕೋತ್ತರ ವಿದ್ಯಾರ್ಥಿಗಳು ಈ ತ್ವರಿತ ಮೌಲ್ಯಮಾಪನದ ಪ್ರಯೋಜನ ಪಡೆದಿದ್ದಾರೆ. ಇದು ಸ್ನಾತಕೋತ್ತರ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಪಿಜಿ ವಿದ್ಯಾರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ನೆರವಾಗಲಿದೆ ಎಂದು ಅವರು ಹೇಳಿದರು. 

ದಾವಣಗೆರೆ ವಿಶ್ವವಿದ್ಯಾನಿಲಯ  ರಾಜ್ಯದಲ್ಲಿ ಏಕೀಕೃತ ವಿಶ್ವವಿದ್ಯಾನಿಲಯ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಯುಯುಸಿಎಂಎಸ್) ಅಳವಡಿಸಿಕೊಂಡ ಮೊದಲನೆಯದು ಎಂದು ಡಾ.ಶಿವಶಂಕರ್ ಹೇಳಿದರು ಮತ್ತು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಅಡಿಯಲ್ಲಿ ಮೊದಲ ಸೆಮಿಸ್ಟರ್ ಯುಜಿ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಪ್ರಕಟಿಸಿದರು.  ಇದು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತಂದಿದೆ. 10 ದಿನಗಳಲ್ಲಿ ಎನ್ ಇಪಿಯಡಿ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳ ಫಲಿತಾಂಶ  ಪ್ರಕಟಿಸುತ್ತೇವೆ ಎಂದು ಅವರು ತಿಳಿಸಿದರು.

SCROLL FOR NEXT