ಸಾಂದರ್ಭಿಕ ಚಿತ್ರ 
ರಾಜ್ಯ

ಕೋಲಾರ: ನಾಲ್ಕನೆಯದ್ದೂ ಹೆಣ್ಣು ಮಗು ಆಗಿದ್ದಕ್ಕೆ ಮನನೊಂದ ತಂದೆ ನೇಣಿಗೆ ಶರಣು..!

ನಾಲ್ಕನೆಯದ್ದು ಹೆಣ್ಣು ಮಗು ಆಗಿದ್ದಕ್ಕೆಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ  ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.

ಕೋಲಾರ: ನಾಲ್ಕನೆಯದ್ದು ಹೆಣ್ಣು ಮಗು ಆಗಿದ್ದಕ್ಕೆಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ  ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಲೋಕೇಶ್ (35) ಆತ್ಮಹತ್ಯೆಗೆ ಶರಣಾಗಿದ್ದಾನೆ. ಲೋಕೇಶ್ ಈಗಾಗಲೇ ಮೂರು ಮಕ್ಕಳಿಗೆ ತಂದೆಯಾಗಿದ್ದು ಇದೀಗ ಜನಿಸಿರುವ ನಾಲ್ಕನೇ ಮಗುವು ಹೆಣ್ಣು ಆಗಿದ್ದರಿಂದ ಮನನೊಂದಿದ್ದ.

ಮೃತ ಲೋಕೇಶ್‌ ದಂಪತಿಗೆ ಈ ಹಿಂದೆಯೇ ಮೂವರು ಹೆಣ್ಣು ಮಕ್ಕಳಿದ್ದರು, ಗಂಡು ಮಗುವಿನ ಆಸೆಗೆ ನಾಲ್ಕನೇ ಮಗು ಮಾಡಿಕೊಂಡಿದ್ದಾನೆ. ಆದ್ರೆ ಅವನ ನಿರೀಕ್ಷೆ ಫಲಿಸದೆ ನಾಲ್ಕನೇ ಮಗುವೂ ಸಹ ಹೆಣ್ಣು ಆಗಿರುವ ಕಾರಣ ಮನನೊಂದ ಲೋಕೇಶ್‌ ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ ಮನೆಯಲ್ಲಿ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನು ಮೃತ ಲೋಕೇಶ್ ಈ ಹಿಂದೆ ಮೂರನೇ ಮಗು ಜನನವಾದಾಗಲೇ ಆತ್ಮಹತ್ಯೆಗೆ ಯತ್ನ ಮಾಡಿದ್ದನಂತೆ. ಆದ್ರೆ ಅದೃಷ್ಟವಶಾತ್ ಮನೆಯವರಿಗೆ ವಿಚಾರ ತಿಳಿದು ಲೋಕೇಶ್‌ನನ್ನು ಬದುಕಿಸಿದ್ದಾರೆ.  ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!