ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರ ಸಾವು
ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ.
ಮೈಸೂರು: ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ.
ವರದಿಗಳ ಪ್ರಕಾರ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ದೌಡಾಯಿಸಿದ್ದು ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.