ಸಾಂದರ್ಭಿಕ ಚಿತ್ರ 
ರಾಜ್ಯ

ತಗ್ಗಿದ ಕೊರೋನಾ: ಇಂದು ಬೆಂಗಳೂರಿನಲ್ಲಿ 53 ಸೇರಿ ರಾಜ್ಯದಲ್ಲಿ 78 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 78 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,69,727ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 78 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,69,727ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40258 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 53 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1875110ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 137 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,27,555ಕ್ಕೆ ಏರಿಕೆಯಾಗಿದೆ. ಇನ್ನು 1872 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!