ರಾಜ್ಯ

ಹಿಂದೂ ಪದದ ಹೇಳಿಕೆ ವಿವಾದ: 'ಸತೀಶ್ ಜಾರಕಿಹೊಳಿ ಹೇಳಿಕೆ ದುರದೃಷ್ಟಕರ' ಎಂದ ಕಾಂಗ್ರೆಸ್

Srinivasamurthy VN

ಬೆಂಗಳೂರು: ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ಪಕ್ಷ ಖಂಡಿಸಿದ್ದು, ಹಿಂದೂ ಪದದ ಕುರಿತ ಹೇಳಿಕೆ ದುರದೃಷ್ಟಕರ ಎಂದು ಹೇಳಿದೆ.

ಹಿಂದೂ ಪದದ ಅರ್ಥವೇ ಅಶ್ಲೀಲ ಎಂದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ(Satish Jarkiholi) ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ(Randeep Singh Surjewala) ತಿರಸ್ಕರಿಸಿದ್ದಾರೆ. 

ಹಿಂದೂ ಧರ್ಮ(Hindu Religion) ಒಂದು ಜೀವನ ವಿಧಾನವಾಗಿದ್ದು, ಪ್ರತಿಯೊಂದು ಧರ್ಮ ಮತ್ತು ನಂಬಿಕೆಯನ್ನು ಗೌರವಿಸಿಕೊಂಡು ಕಾಂಗ್ರೆಸ್ ರಾಷ್ಟ್ರವನ್ನು ನಿರ್ಮಿಸಿದೆ ಎಂದು ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಸತೀಶ್ ಜಾರಕಿಹೊಳಿ ಅವರ ಹೇಳಿಕೆಯು ಅತ್ಯಂತ ದುರದೃಷ್ಟಕರ ಮತ್ತು ತಿರಸ್ಕಾರ ಅರ್ಹ. ಜಾರಕಿಹೊಳಿ ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದ ಸುರ್ಜೇವಾಲ ತಿಳಿಸಿದ್ದಾರೆ.

ನಿನ್ನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, 'ಭಾರತಕ್ಕೂ, ಪರ್ಷಿಯನ್‍ಗೂ ಏನ್ ಸಂಬಂಧ? ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಹೇಳಿದ್ದರು.
 

SCROLL FOR NEXT