ರೈಲು ನಿಲ್ದಾಣದ ಬಳಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವುದು. 
ರಾಜ್ಯ

ನವೆಂಬರ್ 11ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: 'ಎಕ್ಸ್'ಪ್ರೆಸ್ ಮೋಡ್'ನಲ್ಲಿ ಕಾಮಗಾರಿ ಪೂರ್ಣಗೊಳಿಸಲು ಬಿಬಿಎಂಪಿ ಮುಂದು!

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ಮೋದಿಯವರು ನ.11 ರಂದು ನಗರಕ್ಕೆ ಬೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ 'ಎಕ್ಸ್'ಪ್ರೆಸ್ ಮೋಡ್'ನಲ್ಲಿ ಕಾಮಗಾರಿಗಳ ಪೂರ್ಣಗೊಳಿಸಲು ಬಿಬಿಎಂಪಿ ಮುಂದಾಗಿದೆ.

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ಮೋದಿಯವರು ನ.11 ರಂದು ನಗರಕ್ಕೆ ಬೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ 'ಎಕ್ಸ್'ಪ್ರೆಸ್ ಮೋಡ್'ನಲ್ಲಿ ಕಾಮಗಾರಿಗಳ ಪೂರ್ಣಗೊಳಿಸಲು ಬಿಬಿಎಂಪಿ ಮುಂದಾಗಿದೆ.

ಮೆಜೆಸ್ಟಿಕ್‌ನಲ್ಲಿ 8.7 ಕೋಟಿ ರೂಪಾಯಿ ವೆಚ್ಚದ ವೈಟ್‌ಟಾಪಿಂಗ್ ಕಾಮಗಾರಿಯನ್ನು ಬಿಬಿಎಂಪಿ ವೇಗ ನಡೆಸುತ್ತಿದೆ.

ಈ ಕುರಿತು ಬಿಬಿಎಂಪಿ ಇಂಜಿನಿಯರ್ ಗಳು ಮಾತನಾಡಿ, ಮಾರ್ಗದ ಒಂದು ಬದಿಯ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಕಾಂಕ್ರಿಟೀಕರಣದ ಮೊದಲು ಮಿಲ್ಲಿಂಗ್ ಕೆಲಸ ಮಾಡಲು ಅನುಮತಿ ನೀಡುವಂತೆ ಪಶ್ಚಿಮ ಡಿಸಿಪಿ ಮತ್ತು ಬೆಂಗಳೂರು ಸಂಚಾರ ಇಲಾಖೆಗೆ ಮನವಿ ಮಾಡಲಾಗಿತ್ತು, ಆದರೆ ವಿವಿಐಪಿ ಈ ರಸ್ತೆಗಳನ್ನು ಉಪಯೋಗಿಸುವುದರಿಂದ ಮೋದಿ ಭೇಟಿ ವೇಳೆ ಸಂಚಾರ ದಟ್ಟಣೆ ಎದುರಾಗಿ, ಸಮಸ್ಯೆಗಳು ಎದುರಾಗುವುದರಿಂದ ಪೊಲೀಸರು ಅನುಮತಿ ನಿರಾಕರಿಸಿದ್ದಾರೆಂದು ಹೇಳಿದ್ದಾರೆ.

“ಪ್ರಧಾನಿ ಓಕಳಿಪುರಂ ರಸ್ತೆಯಿಂದ ಬಂದು ಹಿಂದಿನ ಗೇಟ್ ಮೂಲಕ ವಂದೇ ಭಾರತ್ ಎಕ್ಸ್'ಪ್ರೆಸ್ ರೈಲಿಗೆ ಚಾಲನೆ ನೀಡಲು ಪ್ಲಾಟ್‌ಫಾರ್ಮ್ ನಂ.7ಕ್ಕೆ ತಲುಪಲಿದ್ದಾರೆ. ಹೀಗಾಗಿ ಬಿಬಿಎಂಪಿ ಗುಬ್ಬಿ ತೋಟದಪ್ಪ ರಸ್ತೆ ಮತ್ತು ನಿಲ್ದಾಣದ ಎದುರಿನ ರಸ್ತೆಯನ್ನು ಸರಿಪಡಿಸುವ ಕೆಲಸವನ್ನು ಮಾಡುತ್ತಿದೆ. ಈ ರಸ್ತೆಯಲ್ಲಿ ಗುಂಡಿಗಳು ಹೆಚ್ಚುತ್ತಲೇ ಇರುವುದರಿಂದ ಕಾಮಗಾರಿ ಬೇಗ ಮುಗಿಯುವಂತೆ ಪಾಲಿಕೆ ಕಾರ್ಮಿಕರನ್ನು ನಿಯೋಜಿಸಿದೆ’ ಎಂದು ಬಿಬಿಎಂಪಿ ಎಂಜಿನಿಯರ್'ಗಳು ಮಾಹಿತಿ ನೀಡಿದ್ದಾರೆ.

"ಇನ್ನೂ ಎರಡು ದಿನಗಳ ಕಾಲ ಮಿಲ್ಲಿಂಗ್ ಕೆಲಸ ನಡೆಯಲಿದ್ದು, ಪ್ರಧಾನಿ ಮೋದಿ ಹಿಂತಿರುಗಿದ ಬಳಿಕ ಪಾಲಿಕೆಯು ಉಳಿದ ಭಾಗಕ್ಕೆ ಕಾಂಕ್ರೀಟ್ ಹಾಕಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ರಸ್ತೆ ಅಗೆಯುವ ವೇಳೆ ಜಲಮಂಡಳಿಯು ಪಾಲಿಕೆಗೆ ಪಾವತಿಸುತ್ತದೆ. ಆದರೆ, ಕೆಲಸ ಮುಗಿದ ಮೇಲೆ ಅದನ್ನು ಸರಿಪಡಿಸುವುದಿಲ್ಲ. ರಸ್ತೆ ಅಗೆದ ಬಳಿಕ ಬಿಡಬ್ಲ್ಯೂಎಸ್ಎಸ್'ಬಿ ರಸ್ತೆ ಸರಿಪಡಿಸುವ ಕೆಲಸ ಮಾಡಬೇಕೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT