KAI ಟರ್ಮಿನಲ್ 2 
ರಾಜ್ಯ

KIA ಟರ್ಮಿನಲ್ 2: ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿ, ವಿಶೇಷತೆಗಳೇನು?

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.

 ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಉದ್ಘಾಟಿಸುತ್ತಿದ್ದು, ಈ ಟರ್ಮಿನಲ್ 2 ಉದ್ಯಾನನಗರಿಯ ಕೀರ್ತಿಗೆ ಮತ್ತೊಂದು ಸೇರ್ಪಡೆಯಾಗಿದ್ದು, ಇಷ್ಟಕ್ಕೂ ಈ ಟರ್ಮಿನಲ್ 2ನ ವಿಶೇಷತೆಗಳೇನು? ಇಲ್ಲಿದೆ ಉತ್ತರ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda International Airport) ಹೊಸದಾಗಿ ಟರ್ಮಿನಲ್ 2, (Bengaluru Terminal 2) ಎರಡನೇ ರನ್‌ ವೇ, ಮಲ್ಟಿಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯಗಳು ಪ್ರಯಾಣಿಕರಿಗೆ ಲಭ್ಯವಾಗಲಿವೆ. ಈ ಟರ್ಮಿನಲ್ 2 ವನ್ನು 'ಗಾರ್ಡನ್ ಟರ್ಮಿನಲ್' ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ದೊಡ್ಡ ಕೃತಕ ಒಳಾಂಗಣ ಉದ್ಯಾನವನ್ನು ಹೊಂದಿದ್ದು, ಈ ಗಾರ್ಡನ್ ಬೆಂಗಳೂರನ್ನು ಭಾರತದ ಉದ್ಯಾನ ನಗರಿ ಎಂದು ಕರೆಯಲಾದ ಬಿರುದನ್ನು ಎತ್ತಿಹಿಡಿಯಲಿದೆ ಎಂದೇ ವ್ಯಾಖ್ಯಾನಿಸಲಾಗಿದೆ.

ಈ ಟರ್ಮಿನಲ್ 2 ನಲ್ಲಿ ಕೃತಕ ಮರಗಿಡಗಳು, ಹಕ್ಕಿಗಳ ಕಲರವ-ಚಿಲಿಪಿಲಿ ನಾದ ಮುಂತಾದವುಗಳನ್ನು ಸಹ ಈ ಉದ್ಯಾನವು ಹೊಂದಿರಲಿದೆ. ಹೀಗಾಗಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 2 ಅತ್ಯಂತ ನಿರೀಕ್ಷೆ ಹುಟ್ಟುಹಾಕಿದೆ. ಅಲ್ಲದೇ ಈ ಸೌಲಭ್ಯದಿಂದ ಬೆಂಗಳೂರು ಉದ್ಯಾನ ನಗರಿ ಎಂಬುದು ಮತ್ತೆ ಸಾಬೀತಾಗಲಿದೆ. 

ಕೋಟ್ಯಂತರ ಪ್ರಯಾಣಿಕರ ಸಾಮರ್ಥ್ಯ
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ಬೆಂಗಳೂರು ವಿಮಾನ ನಿಲ್ದಾಣವನ್ನು ಕ್ಯಾಂಪಸ್‌ನಾದ್ಯಂತ ನವೀಕರಿಸಬಹುದಾದ ಶಕ್ತಿಯನ್ನು ಬಳಸಿಕೊಂಡು 100% ಸುಸ್ಥಿರತೆಯೊಂದಿಗೆ ರಚಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಬೆಂಗಳೂರು ನಗರ ಸ್ಥಾಪಕ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಗೊಳ್ಳಲಿದೆ.

13,000 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ!
ವರದಿಗಳ ಪ್ರಕಾರ ಎರಡನೇ ಟರ್ಮಿನಲ್‌ನ ಮೊದಲ ಹಂತದ ನಿರ್ಮಾಣದ ಅಂದಾಜು ವೆಚ್ಚ 13,000 ಕೋಟಿ ರೂ ಎನ್ನಲಾಗಿದೆ. ಈ ಟರ್ಮಿನಲ್ ಸರಿಸುಮಾರು 2.5 ಲಕ್ಷ ಚದರ ಮೀಟರ್‌ನ ಬಿಲ್ಟ್-ಅಪ್ ಪ್ರದೇಶವನ್ನು ಹೊಂದಿರುತ್ತದೆ. ಎರಡನೇ ಹಂತದಲ್ಲಿ ಈ ಟರ್ಮಿನಲ್‌ಗೆ ಇನ್ನೂ 4.41 ಲಕ್ಷ ಚ.ಮೀ ಹೊಸದಾಗಿ ಸೇರ್ಪಡೆಗೊಳ್ಳಲಿದೆ. ಹೊಸ ಟರ್ಮಿನಲ್‌ನ ಮೊದಲ ಹಂತವು ಒಂದು ವರ್ಷದಲ್ಲಿ 25 ಮಿಲಿಯನ್ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ನಿರೀಕ್ಷೆಯಿದೆ. 

ಅಮೆರಿಕದ ವಾಸ್ತುಶಿಲ್ಪ ಸಂಸ್ಥೆಯಿಂದ ವಿನ್ಯಾಸ!
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇತ್ತೀಚಿನ ಟರ್ಮಿನಲ್‌ನ ವಿನ್ಯಾಸಕ್ಕಾಗಿ ಅಮೆರಿಕದ ವಾಸ್ತುಶಿಲ್ಪ ಸಂಸ್ಥೆ ಸ್ಕಿಡ್‌ಮೋರ್, ಓವಿಂಗ್ಸ್ & ಮೆರಿಲ್ (SOM) ಅನ್ನು ಆಯ್ಕೆ ಮಾಡಲಾಗಿದೆ. ಸ್ವಯಂ ಚೆಕ್-ಇನ್ ಮತ್ತು ಬ್ಯಾಗ್‌ಡ್ರಾಪ್ ಸೌಲಭ್ಯಗಳಂತಹ ಇತರ ಸೌಲಭ್ಯಗಳೊಂದಿಗೆ ಈ ಸೌಲಭ್ಯವು ಸುಂದರವಾದ ಒಳಾಂಗಣ ಉದ್ಯಾನವನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT