ಮಳಲಿ ಮಸೀದಿ 
ರಾಜ್ಯ

ಮಂಗಳೂರು ಮಳಲಿ ಮಸೀದಿ ವಿವಾದ: ವಿಹೆಚ್​ಪಿ ಅರ್ಜಿ ವಿಚಾರಣೆಗೆ ಕೋರ್ಟ್‌ ಅಸ್ತು

ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಮೂರನೇ ಹೆಚ್ಚುವರಿ ಸಿವಿಲ್‌ ಕೋರ್ಟ್‌ ವಿಚಾರಣೆಗೆ ಬುಧವಾರ ಅಂಗೀಕರಿಸಿದೆ.

ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಮೂರನೇ ಹೆಚ್ಚುವರಿ ಸಿವಿಲ್‌ ಕೋರ್ಟ್‌ ವಿಚಾರಣೆಗೆ ಬುಧವಾರ ಅಂಗೀಕರಿಸಿದೆ.

ಇದೇ ವೇಳೆ ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್​ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ಮಸೀದಿ ವಿವಾದದ ಬಗ್ಗೆ ಕಳೆದ ಅ 17ರಂದು ನ್ಯಾಯಾಲಯವು ವಿಚಾರಣೆ ನಡೆಸಿತ್ತು. ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿ ರಚನೆ ಇದೆ. ವಿಚಾರಣೆಗಾಗಿ ಕೋರ್ಟ್​ ಕಮಿಷನರ್ ನೇಮಿಸಬೇಕು ಎಂದು ಹಿಂದುತ್ವ ಪರ ಸಂಘಟನೆಗಳು ಕೋರಿದ್ದವು. ಮಸೀದಿ ವಿಚಾರ ವಕ್ಫ್ ನ್ಯಾಯಾಲಯದಲ್ಲಿ ಮಾತ್ರ ವಿಚಾರಣೆ ಮಾಡಬಹುದೆಂಬ ಮಸೀದಿ ಪರ ವಕೀಲರ ವಾದವನ್ನು ವಾದಿಸಿದ್ದರು.

ಈ ವಾದವನ್ನು ಆಲಿಸಿದ ಬಳಿಕ ಕೋರ್ಟ್‌ ಮಸೀದಿ ಆಡಳಿತದ ಅರ್ಜಿಯನ್ನು ತಿರಸ್ಕರಿಸಿ ಮಳಲಿ ಮಸೀದಿ ಸಂಬಂಧಿಸಿದ ವ್ಯಾಜ್ಯವನ್ನು ಸಿವಿಲ್‌ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ತೀರ್ಪು ನೀಡಿದೆ.

ದೇವಾಲಯ ಶೈಲಿ ಪತ್ತೆಯಾಗಿದ್ದರಿಂದ ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲಿಯೂ ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎ ಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಎಚ್ ಪಿಯ ಅರ್ಜಿಯನ್ನು ಕೋರ್ಟ್‌ ಸ್ವೀಕರಿಸಿ, ಮುಂದಿನ ವಿಚಾರಣೆ ಜ.8 (2023) ರಂದು ನಿಗದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ