ಸಾಂದರ್ಭಿಕ ಚಿತ್ರ 
ರಾಜ್ಯ

ತಗ್ಗಿದ ಕೊರೋನಾ: ಇಂದು ಬೆಂಗಳೂರಿನಲ್ಲಿ 65 ಸೇರಿ ರಾಜ್ಯದಲ್ಲಿ 102 ಮಂದಿಗೆ ಪಾಸಿಟಿವ್; ಸಾವು ಶೂನ್ಯ!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 102 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,70,198ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 102 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,70,198ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,258 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 65 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,75,467ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 87 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,28,055ಕ್ಕೆ ಏರಿಕೆಯಾಗಿದೆ. ಇನ್ನು 1,843 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್