ರಾಜ್ಯ

ಫೋಟೋ ಕಳವು ಪ್ರಕರಣ: ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಬಂಧನ

Shilpa D

ಚಿತ್ರದುರ್ಗ: ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಪ್ರಕರಣದಲ್ಲಿ ಬಂಧಿತರಾಗಿರುವ ಹೊಸಹಳ್ಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೋಹನಮೂರ್ತಿ ಹಾಗೂ ಡಿಪ್ಲೊಮಾ ಕಾಲೇಜು ಉಪನ್ಯಾಸಕ ಶಿವಾನಂದಸ್ವಾಮಿ ನೀಡಿದ ಹೇಳಿಕೆ ಆಧರಿಸಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಫೋಟೊ ತೆಗೆಯಲು ಬಸವರಾಜನ್ ಪ್ರಚೋದನೆ ಮಾಡಿದ್ದಾರೆ ಎಂಬ ಆರೋಪವಿದ್ದ ಮೇರೆಗೆ ಬಂಧಿಸಿದರು.

ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಬಸವರಾಜನ್ ರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದೇ ಪ್ರಕರಣಕ್ಕೆ ಸಂಬಂದಿಸಿ ಬಂಧಿತರಾಗಿರುವ ಹೊಸಹಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮೋಹನಮೂರ್ತಿ ಹಾಗೂ ಡಿಪ್ಲೊಮಾ ಕಾಲೇಜು ಉಪನ್ಯಾಸಕ ಶಿವಾನಂದಸ್ವಾಮಿ ನೀಡಿದ ಹೇಳಿಕೆಯನ್ನು ಆಧರಿಸಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಫೋಟೊ ಕಳವಿಗೆ ಆರೋಪಿ ಬಸವರಾಜನ್ ಪ್ರಚೋದನೆ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಬಂಧಿಸಲಾಗಿದೆ.

ಮತ್ತೊಬ್ಬ ಆರೋಪಿ ಶ್ರೀನಿವಾಸ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಸವರಾಜನ್ ಪತ್ನಿ ಸೌಭಾಗ್ಯ ಅವರಿಗೂ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ 47 ಫೋಟೊಗಳು ಅ.6ರಂದು ಕಳುವಾಗಿದ್ದವು.

SCROLL FOR NEXT