ತುಮಕೂರು ಅಪಘಾತ 
ರಾಜ್ಯ

ತುಮಕೂರು: ಕಾಂಪೌಂಡ್‌ಗೆ ಮಾರುತಿ ವ್ಯಾನ್ ಡಿಕ್ಕಿ; ಇಬ್ಬರ ಸಾವು

ಬೆಸ್ಕಾಂ ಕಚೇರಿಯ ಸೆಕ್ಯೂರಿಟಿ ಕಾಂಪೌಂಡ್‌ಗೆ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಬೆಸ್ಕಾಂ ಕಚೇರಿಯ ಸೆಕ್ಯೂರಿಟಿ ಕಾಂಪೌಂಡ್‌ಗೆ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನ ಹೊರಪೇಟೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ ಮತ್ತೋರ್ವ ಗಾಯಗೊಂಡಿದ್ದಾರೆ.

ತುಮಕೂರು ನಗರದ ನಿವಾಸಿ ದೀಪು (36 ವರ್ಷ) ಹಾಗೂ ಮಾರುತಿ ವ್ಯಾನ್ ಚಾಲಕ ಮುನೀರ್ ಖಾನ್ (25 ವರ್ಷ) ಎಂಬುವವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಾಹನದಲ್ಲಿದ್ದ ಮತ್ತೋರ್ವ ಮಂಜುನಾಥ್ (22 ವರ್ಷ) ಎಂಬಾತ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯರಾತ್ರಿ ಸುಮಾರು 12.15 ಗಂಟೆ ಸಮಯದಲ್ಲಿ ಈ ಮೂವರು ಮಾರುತಿ ವ್ಯಾನ್‌ನಲ್ಲಿ ಮಂಡಿಪೇಟೆ ಕಡೆಯಿಂದ ಹೊರಪೇಟೆಯತ್ತ ತೆರಳುತ್ತಿದ್ದರು. ಹೊರಪೇಟೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಸ್ಕಾಂ ಕಚೇರಿಯ ಸೆಕ್ಯೂರಿಟಿ ಕಾಂಪೌಂಡ್‌ಗೆ ಮಾರುತಿ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಅಪ್ಪಳಿಸಿದ್ದರಿಂದ ದೀಪು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಮುನೀರ್ ಖಾನ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!