ಕಿರಣ್‌ ಮಜುಂದಾರ್‌ ಷಾ 
ರಾಜ್ಯ

ಅಧಿಕಾರಿಗಳು ಕ್ರಮ ಕೈಗೊಳ್ಳಲು ಕಾಳಜಿ ವಹಿಸುತ್ತಾರಾ? ಜನರು ಅವರನ್ನು ಅವಮಾನಿಸುತ್ತಲೇ ಇರಬೇಕಾ?: ಕಿರಣ್ ಮಜುಂದಾರ್ ಶಾ

ಅಧಿಕಾರಿಗಳು ಕಾಳಜಿ ವಹಿಸುತ್ತಾರಾ? ಕ್ರಮ ಕೈಗೊಳ್ಳಲು ನಾಗರಿಕರು ಅವರನ್ನು ಅವಮಾನಿಸುತ್ತಲೇ ಇರಬೇಕಾ ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ. 

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ಮುನ್ನಾ ದಿನದಂದು, ಬಯೋಕಾನ್‌ನ ಕಾರ್ಯನಿರ್ವಾಹಕ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ನಗರದ ಅತ್ಯಂತ ಜನದಟ್ಟಣೆಯ ರಸ್ತೆ ಎಂದು ಹೇಳಬಹುದಾದ ಕಾಡುಬೀಸನಹಳ್ಳಿ ಮತ್ತು ವರ್ತೂರು ಸಂಪರ್ಕಿಸುವ ಕಳಪೆ ರಸ್ತೆ ಮೂಲಸೌಕರ್ಯ ಕುರಿತು ಟ್ವೀಟ್ ಮಾಡಿದ್ದಾರೆ.

ಅಧಿಕಾರಿಗಳು ಕಾಳಜಿ ವಹಿಸುತ್ತಾರಾ? ಕ್ರಮ ಕೈಗೊಳ್ಳಲು ನಾಗರಿಕರು ಅವರನ್ನು ಅವಮಾನಿಸುತ್ತಲೇ ಇರಬೇಕಾ ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.  ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಣತ್ತೂರು ಪ್ರದೇಶದ ವಿದ್ಯಾರ್ಥಿಗಳು ಮತ್ತು ಪೋಷಕರು ಉತ್ತಮ ರಸ್ತೆಗಾಗಿ ಮೇಣದಬತ್ತಿ ಮತ್ತು ಮೊಬೈಲ್‌ ಟಾರ್ಚ್‌ಗಳನ್ನು ಹಿಡಿದು ಮೌನಪ್ರತಿಭಟನೆ ಮಾಡಿದ್ದಾರೆ.

ಸಂಗಪ್ಪ ದೇಸಾಯಿ ಎನ್ನುವವರು ಈ ಬಗ್ಗೆ ಟ್ವಿಟರ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ.  ಬಳಗೆರೆ–ಪಣತ್ತೂರು ರಸ್ತೆಯ ಮೂಲಕ ಸಾಗುವಾಗ ಪಣತ್ತೂರು ಕ್ರಾಸ್‌ನಲ್ಲಿ ಬುಧವಾರ ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ದಟ್ಟಣೆಯಲ್ಲಿ ಸಿಲುಕಿರುವುದನ್ನು ವಿದ್ಯಾರ್ಥಿಗಳೇ ವಿವರಿಸಿದ್ದಾರೆ. ಶಾಲೆಯಿಂದ ಮಕ್ಕಳು ಸರಿಯಾದ ಸಮಯಕ್ಕೆ ಮನೆಗೆ ಬರಲು ಸಾಧ್ಯವಾಗುತ್ತಿಲ್ಲ. ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಪೋಷಕರು ದೂರಿದ್ದಾರೆ.

ವಿಡಿಯೊ ಅನ್ನು ಮರು ಟ್ವೀಟ್‌ ಮಾಡಿರುವ ಕಿರಣ್ ಮಜುಂದಾರ್ ಶಾ, ’ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆಯೇ? ರಾಜಕಾರಣಿಗಳನ್ನು ಪ್ರತಿಯೊಂದಕ್ಕೂ ದೂರಲು ಸಾಧ್ಯವಿಲ್ಲ. ಕೆಳಹಂತದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿತ್ತು. ಅಧಿಕಾರಿಗಳ ಜತೆಗೆ ಗುತ್ತಿಗೆದಾರರು ಸಹ ಉತ್ತರದಾಯಿತ್ವ ಹೊಂದಿದ್ದಾರೆ’ ಎಂದು ಹೇಳಿದ್ದಾರೆ.

ಈ ಪ್ರದೇಶವು ಹೊರ ವರ್ತುಲ ರಸ್ತೆಯಿಂದ ಕೇವಲ 2 ಕಿ.ಮೀ.  ದೂರವಿದೆ, ಆದರೆ ಈ ಕಾಮಗಾರಿಗಳೆಲ್ಲವೂ ನನೆಗುದಿಗೆ ಬಿದ್ದಿವೆ.  ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿ ಕಾಮಗಾರಿಗೆ ವೇಗ ನೀಡುವಂತೆ ಒತ್ತಾಯಿಸಿದ್ದಾರೆ. ನರೇಂದ್ರ ಮೋದಿಜಿ ನೀವು ನಮ್ಮ ಬೆಂಗಳೂರಿಗೆ ಬಂದಾಗ ನಮ್ಮನ್ನು ಭೇಟಿ ಮಾಡಿ ಎಂದರು. ನಮ್ಮ ಬೆಂಗಳೂರು ಪೇಜ್ ಟ್ವೀಟ್ ಮಾಡಿದೆ.

"ಸಮಸ್ಯೆಯನ್ನುಸರಿ ಪಡಿಸಲು ನಾನು ಸಂಬಂಧಿಸಿದ  ಸಂಸ್ಥೆ ಮತ್ತು ಅಧಿಕಾರಿಗಳ ಸಭೆ ನಡೆಸುತ್ತೇನೆ." ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಬಿಬಿಎಂಪಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ ಎಂದು ಸಂಗಪ್ಪ ದೇಸಾಯಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ