ರಾಜ್ಯ

ಜನವರಿ 1 ರಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆ: ಕೋಟ ಶ್ರೀನಿವಾಸ ಪೂಜಾರಿ

Shilpa D

ಬೆಂಗಳೂರು: ರಾಜ್ಯ ಸರ್ಕಾರವು ಜನವರಿ 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚಲಕ್ಕಿಯನ್ನು ನೀಡಲಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನರಿಗೆ ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದೆ.

ಇದಕ್ಕಾಗಿ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಡಿಸೆಂಬರ್‌ 1ರಿಂದ ಕುಚಲಕ್ಕಿ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್​ದಾರರಿಗೆ ಕುಚಲಕ್ಕಿ ವಿತರಿಸಲಾಗುವುದು. ಮೂರೂ ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ​​ ಕುಚಲಕ್ಕಿ ಅವಶ್ಯಕತೆ ಇದೆ ಎಂದು ತಿಳಿಸಿದರು.

ಕರಾವಳಿ ಜಿಲ್ಲೆಗಳಲ್ಲಿ ಬಿಪಿಎಲ್ ಪಡಿತರ ಹೊಂದಿರುವವರಿಗೆ ಕುಚಲಕ್ಕಿ ವಿತರಿಸಬೇಕು ಎನ್ನುವ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ಸಮೀಪದ ಕಾಪುವಿನಲ್ಲಿ ಇತ್ತೀಚೆಗೆ ನಡೆದ ಜನಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪಡಿತರದಲ್ಲಿ ಕುಚಲಕ್ಕಿ ಕೊಡಬೇಕು ಎಂಬ ಕರಾವಳಿಗರ ಬಹುದಿನಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸುತ್ತಿದೆ ಎಂದು ಘೋಷಿಸಿದರು.

ಕುಚಲಕ್ಕಿ ವಿತರಣೆಗೆ ಸಿಎಂ ಒಪ್ಪಿಗೆ ಪ್ರತಿ ಕ್ವಿಂಟಲ್​ ಕುಚಲಕ್ಕಿಗೆ 2,540 ರೂಪಾಯಿ ನೀಡಲಾಗುವುದು. ಪಡಿತರದಲ್ಲಿ ಕುಚಲಕ್ಕಿ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿ ಸೂಚಿಸಿದ್ದಾರೆ. ಈ ಮೂರೂ ಜಿಲ್ಲೆಗಳಿಗೆ ತಿಂಗಳಿಗೆ 1 ಲಕ್ಷ ಕ್ವಿಂಟಾಲ್ ಅಕ್ಕಿ ಬೇಕಿದೆ. ಇದಕ್ಕಾಗಿ 18 ಲಕ್ಷ ಕ್ವಿಂಟಾಲ್ ಭತ್ತ ಸಂಸ್ಕರಿಸಬೇಕಾಗಿದೆ. ಇದನ್ನು ಬೇರೆಡೆಯಿಂದ ಕೊಳ್ಳುವ ಬದಲು ಕರಾವಳಿ ಜಿಲ್ಲೆಗಳಲ್ಲಿಯೇ ಖರೀದಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ಕರಾವಳಿ ಜಿಲ್ಲೆಗಳಲ್ಲಿ ಬಿಪಿಎಲ್ ಪಡಿತರ ಹೊಂದಿರುವವರಿಗೆ ಕುಚಲಕ್ಕಿ ವಿತರಿಸಬೇಕು ಎನ್ನುವ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಕುಚಲಕ್ಕಿ ಭತ್ತಕ್ಕೆ ಪ್ರೋತ್ಸಾಹ ಧನ ಕರಾವಳಿ ಜಿಲ್ಲೆಗಳಿಗೆ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿಯನ್ನು ವಿತರಿಸಲು ಖರೀದಿಸುವ ಪ್ರತಿ ಕ್ವಿಂಟಾಲ್ ಭತ್ತಕ್ಕೆ 500 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರವಾರದಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿನಿಯರಿಗೆ ಕರಾಟೆ ಸಮವಸ್ತ್ರಗಳನ್ನು ಖರೀದಿಸಲು ಹೆಚ್ಚುವರಿ ಹಣದ ಅಗತ್ಯವಿದೆ ಎಂದು ಸಚಿವರು ಹೇಳಿದರು. ಪ್ರಸ್ತುತ, ಅವರು ಈಗಾಗಲೇ 176 ಕೋಟಿ ರೂ ಪಾವತಿಸಿದ್ದಾರೆ ಮತ್ತು ಈ ವರ್ಷದಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ ಕರಾಟೆ ತರಗತಿಗಳಿಗೆ ಬರುವುದರಿಂದ ಅವರಿಗೆ ಸಮವಸ್ತ್ರ ನೀಡಲು ಹೆಚ್ಚುವರಿ 18 ಕೋಟಿ ರೂ. ಹಣ ಬೇಕಾಗಿದೆ ಎಂದು ಮಾಹಿತಿ ನೀಡಿದ್ದಾರೆ.

SCROLL FOR NEXT