ಸಾಂದರ್ಭಿಕ ಚಿತ್ರ 
ರಾಜ್ಯ

ಮತ್ತಷ್ಟು ತಗ್ಗಿದ ಕೊರೋನಾ: ಇಂದು ಬೆಂಗಳೂರಿನಲ್ಲಿ 42 ಸೇರಿ ರಾಜ್ಯದಲ್ಲಿ 61 ಮಂದಿಗೆ ಪಾಸಿಟಿವ್; ಒಂದು ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 61 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,70,333ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 61 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,70,333ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಸಾವನ್ನಪ್ಪಿದ್ದು ಇದರೊಂದಿಗೆ ಸಾವಿನ ಸಂಖ್ಯೆ 40,260ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 42 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,75,546ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 37 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,28,150ಕ್ಕೆ ಏರಿಕೆಯಾಗಿದೆ. ಇನ್ನು 1,881 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಅದ್ಧೂರಿಯಾಗಿ ನಡೆಯಲಿದೆ ಶರ್ಮಿಳಾ ಮಾಂಡ್ರೆ ಮದುವೆ; ದಿನಾಂಕ, ಸ್ಥಳ ಫಿಕ್ಸ್; ಗ್ಲಾಮರಸ್‌ ನಟಿಯ ಮ್ಯಾರೇಜ್ ಎಲ್ಲಿ ಗೊತ್ತಾ?

ನಟ ಪ್ರಕಾಶ್ ರೈಗೆ ಜಾಮೀನು ಮಂಜೂರು; ಬಂಧನ ಭೀತಿಯಿಂದ ಪಾರು!

ಬ್ಯಾಕ್ ಟು ಬ್ಯಾಕ್ ಸರಣಿ ಸೋಲು: ಕೋಚ್ Gautam Gambhir ರೆಕ್ಕೆಪುಕ್ಕ ಕಟ್? BCCI ಮಹತ್ವದ ರೀವ್ಯೂ ಮೀಟಿಂಗ್!

ರಾಕೆಟ್ ಮರು ಬಳಕೆ: SpaceX ಬಳಿಕ ಇದೀಗ ಹೊಸ ಮೈಲುಗಲ್ಲು ತಲುಪಿದ ಚೀನಾ!