ಸುಪ್ರೀಂ ಕೋರ್ಟ್ 
ರಾಜ್ಯ

ಜಿಲ್ಲಾ-ತಾಲ್ಲೂಕು ಪಂಚಾಯತ್ ಚುನಾವಣೆ: ಸುಪ್ರೀಂ ಕೋರ್ಟ್ ನಿಂದ ರಾಜ್ಯ ಚುನಾವಣಾ ಆಯೋಗ ಅರ್ಜಿ ತಿರಸ್ಕಾರ

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿದೆ. ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಬೋಸ್, ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. 

ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿದೆ.ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಬೋಸ್, ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. 

ಕಳೆದ ವರ್ಷ ಮೇ ತಿಂಗಳಲ್ಲಿ ನಿಗದಿಯಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ಕುರಿತು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಲಿಲ್ಲ. ನಿನ್ನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅರ್ಜಿಯು ಹೈಕೋರ್ಟ್‌ನಲ್ಲಿ ಇತ್ಯರ್ಥಕ್ಕೆ ಬಾಕಿ ಇರುವಾಗ ಮದ್ಯಪ್ರವೇಶಿಸುವುದಿಲ್ಲ ಎಂದು ಕಾರಣ ನೀಡಿತು.

ಕ್ಷೇತ್ರಗಳ ವಿಂಗಡಣೆ ಮತ್ತು ಮೀಸಲಾತಿಯನ್ನು ಪೂರ್ಣಗೊಳಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 12 ವಾರಗಳ ಕಾಲಾವಕಾಶ ನೀಡಿದ್ದು, ಇನ್ನು ಕೆಲ ದಿನಗಳಲ್ಲಿ ಅದು ಮುಕ್ತಾಯಗೊಳ್ಳಲಿದೆ. ಈ ಸಂಬಂಧ ಮತ್ತೆ ಹೈಕೋರ್ಟ್ ಮೊರೆ ಹೋಗುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. 

ಕಳೆದ ವರ್ಷ ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಗಳ ಅವಧಿ ಮುಗಿದಾಗ ಚುನಾವಣಾ ಆಯೋಗ ಚುನಾವಣೆ ನಡೆಸಲು ಸಜ್ಜಾಗಿತ್ತು. 

ಚುನಾವಣಾ ಆಯೋಗ ಕ್ಷೇತ್ರ ಮರುವಿಂಗಡಣೆ(Delimitation) ನಡೆಸಿದ್ದು ಮೀಸಲಾತಿಗೆ ಸೀಟು ನಿಗದಿಯನ್ನು ನಡೆಸಿತ್ತು. ಚುನಾವಣಾ ದಿನಾಂಕಗಳನ್ನು ಘೋಷಿಸುವ ಹೊತ್ತಿಗೆ, ರಾಜ್ಯ ಸರ್ಕಾರವು ಚುನಾವಣಾ ಆಯೋಗದಿಂದ ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿಯ ಅಧಿಕಾರವನ್ನು ಹಿಂತೆಗೆದುಕೊಂಡು ಪ್ರತ್ಯೇಕ ಗಡಿ ನಿರ್ಣಯ ಆಯೋಗವನ್ನು ಸ್ಥಾಪಿಸಿತು. ನಂತರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ

Russia-Ukraine war: ಸಂಕಷ್ಟದಲ್ಲಿರುವ ಭಾರತೀಯರ ಕುಟುಂಬಗಳಿಗೆ ನೆರವು; Nodal ಅಧಿಕಾರಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ Supreme Court ಸೂಚನೆ

ಮಹಾರಾಷ್ಟ್ರ: ಭಿವಂಡಿಯಲ್ಲಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ; Video

Parliament Monsoon Session: ಸಂಸತ್‌ನಲ್ಲಿ ಮತ್ತೆ ಹೈಡ್ರಾಮಾ; ಅಮಿತ್ ಶಾ ವಿಚಾರವಾಗಿ ಭಾರೀ ಗದ್ದಲ, Lok Sabha-Rajya Sabha ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!