ರಾಜ್ಯ

ಬೆಂಗಳೂರಿನಲ್ಲಿ ಮೋದಿ ಕಾರ್ಯಕ್ರಮ: ಕಾರ್ಮಿಕರಿಗೆ ಬಾಕಿ ಹಣ ನೀಡದ ಬಿಜೆಪಿ ಮುಖಂಡನ ವಿರುದ್ಧ ಕೇಸ್

Lingaraj Badiger

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ್ದು, ಈ ಕಾರ್ಯಕ್ರಮಕ್ಕಾಗಿ ಕೆಲಸ ಮಾಡಲು ಕರೆ ತಂದಿದ್ದ ಕೂಲಿ ಕಾರ್ಮಿಕರಿಗೆ ಬಾಕಿ ಹಣ ಪಾವತಿ ಮಾಡದ ಸ್ಥಳೀಯ ಬಿಜೆಪಿ ಮುಖಂಡನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ಅವರ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕಾರ್ಮಿಕರು ದೂರು ದಾಖಲಿಸಿದ್ದಾರೆ.

ಪೊಲೀಸರ ಪ್ರಕಾರ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಪ್ರತಿಮೆಯ ಸ್ಥಳದಲ್ಲಿ ಕೆಲಸ ಮಾಡಲು ಈ ಕಾರ್ಮಿಕರನ್ನು ಕರೆದುಕೊಂಡು ಹೋಗಲಾಗಿತ್ತು.

ಪ್ರತಿ ಕಾರ್ಯಕರ್ತನಿಗೆ 500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ ನಂದೀಶ್ ಅವರು, ಕಾರ್ಯಕ್ರಮ ಮುಗಿದ ಬಳಿಕ ಕೇವಲ 100 ರೂ. ನೀಡಿದ್ದಾರೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

SCROLL FOR NEXT