ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 17 ರವರೆಗೆ ಭಾರಿ ಮಳೆ

Ramyashree GN

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಐಎಂಡಿ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ನಿರಂತರ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ನ.17ರವರೆಗೆ ಮುಂಜಾನೆ ಮಂಜು ಮುಸುಕಿದ ರೀತಿಯಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎನ್ನಲಾಗಿದೆ.

ನಿರೀಕ್ಷಿತ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 26 ಡಿಗ್ರಿ ಇರಲಿದೆ. ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯು ತನ್ನ ಗಡಿಯ ಸಮೀಪದಲ್ಲಿರುವ ಬೆಂಗಳೂರಿನ ಮೇಲೂ ಪರಿಣಾಣ ಬೀಳಲಿದೆ.

ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ಯಾವುದೇ ಜೀವಹಾನಿಯಾಗದಂತೆ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

SCROLL FOR NEXT