ಪ್ರಿಯಾಂಕ್ ಖರ್ಗೆ 
ರಾಜ್ಯ

ವಿವೇಕ ಶಾಲೆಗಳಿಗೆ 'ತ್ರಿವರ್ಣ ಬಣ್ಣ' ಬಳಿಯುವಂತೆ ಪ್ರಿಯಾಂಕ್ ಖರ್ಗೆ ಸಲಹೆ

ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ 8,100 ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವ ರಾಜ್ಯ ಸರ್ಕಾರದ ನಿರ್ಧಾರ ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ 8,100 ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವ ರಾಜ್ಯ ಸರ್ಕಾರದ ನಿರ್ಧಾರ ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ , ಕೇಸರಿ ಬಣ್ಣಕ್ಕೆ ವಿರೋಧವಿಲ್ಲ, ಆದರೆ ಸರ್ಕಾರದ ಆದ್ಯತೆಗೆ ವಿರೋಧವಿದೆ ಎಂದಿದ್ದಾರೆ. ಎಷ್ಟೋ ಶಾಲೆಗಳಲ್ಲಿ ಶಿಕ್ಷಕರು, ಮೂಲಸೌಕರ್ಯದ ಕೊರತೆಯಿದೆ. ಮೂಲಸೌಕರ್ಯ ಒದಗಿಸಲು ಅನುದಾನ ಒದಗಿಸದ ಸರ್ಕಾರ ಶಾಲೆಗಳ ಗೋಡೆಗಳಿಗೆ ಬಣ್ಣ ನೀಡಲು ಆದ್ಯತೆ ನೀಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಕೇಸರಿ ಬಣ್ಣ ಮಾತ್ರ ಏಕೆ ಹಾಕಬೇಕು ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ಸ್ವಾತಂತ್ರ್ಯ ಭಾರತದಲ್ಲಿ ರಾಷ್ಟ್ರೀಯವಾದಿ ಪಕ್ಷ ಎಂದು ನೀವೇ ಹೇಳಿಕೊಳ್ಳುವಂತೆ ಶಾಲೆಗಳ ಗೋಡೆಗಳಿಗೆ ತ್ರಿವರ್ಣ ಧ್ವಜದ ಬಣ್ಣ ಹಾಕಬೇಕು ಎಂದು ಅವರು ಒತ್ತಾಯಿಸಿದರು. ಆರ್ಕಿಟೆಕ್ಚರ್‌ ಸಲಹೆ ಪಡೆಯುವುದಾಗಿ ಹೇಳಿದ್ದೀರಿ. ಹಾಗಾದರೆ ಸರ್ಕಾರ ಮತ್ತು ಇಲಾಖೆಯನ್ನು ಅವರ ಸಲಹೆ ಮೇರೆಗೆ ನಡೆಸಲಾಗುತ್ತಿದೆಯೇ? ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ