ಕಲಬುರಗಿ: ಬಿಜೆಪಿ ಮುಖಂಡನ ಬರ್ಬರ ಹತ್ಯೆ
ಚಾಕು ಇರಿದು ಬಿಜೆಪಿ ಮುಖಂಡನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ಕಲಬುರಗಿ: ಚಾಕು ಇರಿದು ಬಿಜೆಪಿ ಮುಖಂಡನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ಮೃತ ಬಿಜೆಪಿ ಮುಖಂಡನನ್ನು ಮಲ್ಲಿಕಾರ್ಜುನ್ ಮುತ್ಯಾಲ (64) ಎಂದು ಗುರುತಿಸಲಾಗಿದೆ. ಬಿಜೆಪಿ ಮುಖಂಡರೂ ಆಗಿದ್ದ ಮಲ್ಲಿಕಾರ್ಜುನ್ ಅವರು ಸೇಡಂ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಅಂಗಡಿ ಮತ್ತು ಟಿವಿ ಶಾಪ್ ಇಟ್ಟುಕೊಂಡಿದ್ದರು.
ಎಲೆಕ್ಟ್ರಾನಿಕ್ ಅಂಗಡಿಯಲ್ಲೇ ಇಂದು(ಮಂಗಳವಾರ) ಮಲ್ಲಿಕಾರ್ಜುನ್ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮರ್ಮಾಂಗಕ್ಕೆ ಚಾಕು ಇರಿದು, ಕತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸೇಡಂ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.