ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಚುಕ್ಕೆ ರೋಗದ ನಿವಾರಣೆ ಹಾಗೂ ಹರಡದಂತೆ ಕ್ರಮ ವಹಿಸಲು ಸರ್ಕಾರ ಸಿದ್ಧ: ಸಿಎಂ ಬೊಮ್ಮಾಯಿ

ರಾಜ್ಯದ ವಾಣಿಜ್ಯ ಬೆಳೆಯಾದ ಅಡಿಕೆ ಮರಕ್ಕೆ ತಗಲುವ ಎಲೆಚುಕ್ಕೆ ರೋಗದ ನಿವಾರಣೆ ಹಾಗೂ ಹರಡದಂತೆ ಕ್ರಮ ವಹಿಸಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಚಿಕ್ಕಮಗಳೂರು: ರಾಜ್ಯದ ವಾಣಿಜ್ಯ ಬೆಳೆಯಾದ ಅಡಿಕೆ ಮರಕ್ಕೆ ತಗಲುವ ಎಲೆಚುಕ್ಕೆ ರೋಗದ ನಿವಾರಣೆ ಹಾಗೂ ಹರಡದಂತೆ ಕ್ರಮ ವಹಿಸಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿದ್ದು, ಈಗಾಗಲೇ ವಿಶ್ವವಿದ್ಯಾಲಯಗಳು, ಸಂಬಂಧಪಟ್ಟ ಇಲಾಖೆ ಹಾಗೂ ಕೇಂದ್ರ ಸರ್ಕಾರದ ಸಂಸ್ಥೆಗಳು ಎಲೆಚುಕ್ಕೆ ರೋಗ ಪರಿಹರಿಸಲು ಕಾರ್ಯೋನ್ಮುಖವಾಗಿವೆ. ಸರ್ಕಾರ  ಮುಂಜಾಗ್ರತಾ ಕ್ರಮವಾಗಿ ಔಷಧಿ ಸಿಂಪಡನೆಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಎಲೆಚುಕ್ಕೆ ರೋಗದ ಮೂಲಕಾರಣ ಹಾಗೂ ಔಷಧಿಯ ಬಗ್ಗೆ ವಿಜ್ಞಾನಿಗಳು ಅಧ್ಯಯನ ನಡೆಸಿ, ಚಿಕಿತ್ಸಾ ಮಾರ್ಗ ಕಂಡುಹಿಡಿದರೆ ಅದರಂತೆ ಸರ್ಕಾರ ಕ್ರಮಕೈಗೊಳ್ಳುವುದು. ಈ ರೋಗ ದೊಡ್ಡ ಪ್ರಮಾಣದಲ್ಲಿ ಹರುಡುತ್ತಿರುವುದರಿಂದ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.

ಸರ್ಕಾರ ಒಂದೂವರೆ ತಿಂಗಳೊಳಗೆ ಬೆಳೆ ಪರಿಹಾರ ನೀಡಿದೆ:
ಮಲೆನಾಡು ಹಾಗೂ ಬಯಲುಸೀಮೆಗಳಲ್ಲಿ ಈರುಳ್ಳಿ ಸೇರಿದಂತೆ ಹಲವು ಬೆಳೆಗಳ ನಾಶಕ್ಕೆ ಪರಿಹಾರ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಸರ್ಕಾರ ಈಗಾಗಲೇ ದುಪ್ಪಟ್ಟು ಪರಿಹಾರ ನೀಡುತ್ತಿದೆ. ಈಗಾಗಲೇ 99 ಕೋಟಿ ರೂ.ಗಳಷ್ಟು ಬೆಳೆಪರಿಹಾರವನ್ನು ವಿತರಿಸಲಾಗಿದೆ. ಜಿಲ್ಲಾಡಳಿತ ಬೆಳೆನಾಶಕ್ಕೆ ಜಂಟಿಸರ್ವೇ ಮಾಡಿ ವರದಿ ನೀಡಿದರೆ, ಅದಕ್ಕೂ ಸರ್ಕಾರ ಬೆಳೆಪರಿಹಾರ ನೀಡಲಿದೆ. ಈ ಹಿಂದೆ ಬೆಳೆನಾಶವಾಗಿ ಒಂದು ವರ್ಷವಾದ ನಂತರ ಪರಿಹಾರ ದೊರೆಯುತ್ತಿತ್ತು. ಆದರೆ ಈಗ ಸ್ಪಂದನಾಶೀಲ ಸರ್ಕಾರವಿರುವುದರಿಂದ ರೈತರ ರಕ್ಷಣೆ ಧಾವಿಸಲಾಗಿದ್ದು, ಒಂದೂವರೆ ತಿಂಗಳೊಳಗೆ ಬೆಳೆ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

SCROLL FOR NEXT